ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಉಕ್ಕಿನ ಮಹಿಳೆ ಇಂದಿರಾಗಾಂಧಿ ಅವರು ಯುವ ಪೀಳಿಗೆಗೆ ಸ್ಪೂರ್ತಿಯಾಗಿದ್ದು, ಅವರ ತತ್ವ ಅದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ತಿಳಿಸಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಸಂವಿಧಾನ ಸರ್ಮಪಣೆ ದಿನ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜಯಂತಿ ಅಂಗವಾಗಿ ಆಯೋಜನೆ ಮಾಡಿದ್ದ ಪ್ರಬಂಧ ಸ್ಫರ್ಧೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಅಭಿವೃದ್ದಿ ಪೂರಕವಾಗಿ ಎಲ್ಲಾ ಜಾತ್ಯತೀತ ನಿಲುವು ಹೊಂದಿರುವ ಎಲ್ಲಾ ವರ್ಗದವರ ಅಭಿವೃದ್ದಿಯನ್ನು ಬಯಸಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ರಚನೆ ಮಾಡಿ, ನ. 23 ರಂದು ದೇಶಕ್ಕೆ ಸಂವಿಧಾನವನ್ನು ಸಮರ್ಪಣೆ ಮಾಡಿದ ಶುಭ ದಿನ ಇದಾಗಿದೆ. ದೇಶಕ್ಕೆ ಸುಭದ್ರ ಹಾಗೂ ಉತ್ತಮ ಆಡಳಿತ ನೀಡಿದ ಉಕ್ಕಿನ ಮಹಿಳೆ ಇಂದಿರಾಗಾಂಧಿ ಅವರ ಜಯಂತಿಯು ಸಹ ನ. 20 ಆಗಿದ್ದು, ಈ ಎರಡು ಕಾರ್ಯಕ್ರಮಗಳನ್ನು ಎನ್ಎಸ್ಯುಐನ ಅಧ್ಯಕ್ಷ ನಾಗು ಮೋಹನ್ ಬಹಳ ಯಶಸ್ವಿಯಾಗಿ ಸಂಘಟನೆ ಮಾಡಿದ್ದಾರೆ. ಪ್ರಬಂಧ ಸ್ಪರ್ಧೆಯನ್ನು ಆಯೋಜನೆ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಇಬ್ಬರು ನಾಯಕರ ವಿಚಾರಧಾರೆಗಳನ್ನು ತಿಳಿಸುವ ಪ್ರಯತ್ನ ಮಾಡಿದ್ದಾರೆ. ಕಳೆದ ವರ್ಷ ಚರ್ಚಾ ಸ್ಪರ್ಧೆಯನ್ನು ನಡೆದಿತ್ತು ಎಂದರು,
ಕಾಂಗ್ರೆಸ್ ಪಕ್ಷದ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವ ಜೊತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಜನಪರ ಕೆಲಸ ಮಾಡುತ್ತಿದೆ. ಮಹಿಳೆಯರ ಕಲ್ಯಾಣಕ್ಕಾಗಿ ವಿಶೇಷ ಒತ್ತು ನೀಡುತ್ತಿದೆ. ಇದೇ ಮಾಧರಿಯಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು ದೇಶದ ಜನರಿಗೆ ಈ ಎಲ್ಲಾ ಯೋಜನೆಗಳು ದೊರೆಯುವಂತೆ ಮಾಡಲು ಮುಂದಾಗಬೇಕು ಎಂದರು.
ಎನ್ಎಸ್ಯುಐನ ರಾಜ್ಯ ಉಪಾಧ್ಯಕ್ಷ ರಫೀಕ್ ಅಲಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿ ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಎನ್ಎಸ್ಯುಐ ಪ್ರಬಲವಾಗಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದೆ. ತಮ್ಮೇಲ್ಲರ ಯಾವುದೇ ಸಮಸ್ಯೆ ಇದ್ದರು ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ನಮ್ಮ ಪದಾಧಿಕಾರಿಗಳು ಬದ್ದರಾಗಿದ್ದಾರೆ. ಸಂವಿಧಾನ ಸಮರ್ಪಣಾ ದಿನ ಹಾಗೂ ಇಂದಿರಾಗಾಂಧಿ ಅವರ ಜಯಂತಿ ಅಂಗವಾಗಿ ನಡೆಯುತ್ತಿರುವ ಪ್ರಬಂದ ಸ್ಪರ್ಧೆಯಲ್ಲಿ ಭಾಗವಹಿಸಿರುವ ಎಲ್ಲರು ಸಹ ಪ್ರಸ್ತತ ರಾಜಕೀಯ ವಿದ್ಯಾಮಾನಗಳ ಕುರಿತು ತಮಗೆ ಅರಿವಿರುವ ವಿಚಾರಗಳನ್ನು ಬರೆಯಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ಸಂವಿಧಾನ ಪೀಠಿಕೆಯನ್ನು ಭೋದಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಎನ್ಎಸ್ಯುಐನ ಜಿಲ್ಲಾಧ್ಯಕ್ಷ ನಾಗುಮೋಹನ್, ಎಪಿಎಂಸಿ ನಿರ್ದೇಶಕ ಅಲೂರು ಪ್ರದೀಪ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಎನ್. ಲೋಕೇಶ್ , ಸಾಮಾಜಿಕ ಜಾಲತಾನದ ಅಧ್ಯಕ್ಷ ಸೈಯದ್ ಮುಸಾಯಿಬ್, ಯುವ ಕಾಂಗ್ರೆಸ್ ಕಾರ್ಯದರ್ಶಿ ಅರಕಲವಾಡಿ ಸೋಮೇಶ್, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸೈಯದ್ ತೈಸಿಪ್ , ಪ್ರಚಾರ ಸಮಿತಿಯ ಅಧ್ಯಕ್ಷ ಅಕ್ಷಯ್, ಮುತ್ತುರಾಮ್ ದಸ್ತಗಿರಿ, ಕುಮಾರ್ ಚಿಕ್ಕಹೊಳೆ, ಸಂಪತ್ತುಕುಮಾರ್ ಮೊದಲಾಧವರು ಇದ್ದರು.