ಅ.15 ರಂದು ದಸರಾ ಮಹೋತ್ಸವ ಉದ್ಘಾಟನೆ

ಮೈಸೂರು: ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಅಕ್ಟೋಬರ್ 15 ರಂದು ಬೆಳಿಗ್ಗೆ 10:15 ರಿಂದ 10.36 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಖ್ಯಾತ ಸಿನಿಮಾ ಸಾಹಿತಿ ಹಾಗೂ ಚಲನಚಿತ್ರ ಸಂಗೀತ ನಿರ್ದೇಶಕರಾದ ನಾದಬ್ರಹ್ಮ ಡಾ.ಹಂಸಲೇಖ ಅವರು 2023 ರ ದಸರಾ ಮಹೋತ್ಸವಕ್ಕೆ ಚಾಲನೆ ನೀಡುವರು.



ಕಾರ್ಯಕ್ರಮದ ಘನ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಕೇಂದ್ರ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲ ಸೀತಾರಾಮನ್, ಮಾನ್ಯ ಕೇಂದ್ರ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ, ಕೌಶಲಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ ರಾಜ ಚಂದ್ರಶೇಖರ್, ಕೃಷಿ ಹಾಗೂ ರೈತ ಕಲ್ಯಾಣ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ ನಾರಾಯಣಸ್ವಾಮಿ, ರಾಸಾಯನಿಕ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಜಿ.ಟಿ ದೇವೇಗೌಡ ವಹಿಸಲಿದ್ದು, ಸಮಾರಂಭದ ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ ಪಾಟೀಲ್, ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಇಂಧನ ಸಚಿವರಾದ ಕೆ.ಜೆ ಜಾರ್ಜ್, ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್ ಸುರೇಶ್ ಹಾಗೂ ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *