ಚಾಮರಾಜನಗರ: ಕಾಂಗ್ರೆಸ್ ಸರ್ಕಾರದಿಂದ ಎಸ್ ಸಿಪಿ, ಟಿಎಸ್ ಪಿ ಅನುದಾನ ದುರ್ಬಳಕೆ ವಿರುದ್ದ ಜನಾಂದೋಲನ , ಜಿಲ್ಲಾ ಮಟ್ಟದ ವಿಚಾರ ಸಂಕಿರಣವನ್ನು ಸಾಮಾಜಿಕ ನ್ಯಾಯ ಸಬಲೀಕರಣ ವೇದಿಕೆ ವತಿಯಿಂದ ಅ.7 ರಂದು ಶನಿವಾರ ನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ನ್ಯಾಯ ಸಬಲೀಕರಣ ವೇದಿಕೆಯ ಅಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಅಂದು ಬೆಳಿಗ್ಗೆ 11 ಕ್ಕೆ ನಡಯುವ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಶ್ರೀರಾಮುಲು ಉದ್ಘಾಟಿಸಲಿದ್ದಾರೆ. ಲೋಕಸಭಾ ಸಭಾ ಸದಸ್ಯರಾದ ವಿ.ಶ್ರೀನಿವಾಸಪ್ರಸಾದ್ ಪುಷ್ಷಾರ್ಚನೆ ಮಾಡಲಿದ್ದಾರೆ. ದಲಿತ ಮಹಾಸಭಾ ರಾಜ್ಯ ಉಪಾಧ್ಗಕ್ಷ ವೆಂಕಟರಮಣಸ್ವಾಮಿ ಅವರು ಅಧ್ಗಕ್ಷತೆ ವಹಿಸಲಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಸಂಘದ ಜಿಲ್ಲಾಧ್ಯಕ್ಷರಾದ ಎಂ.ರಾಮಚಂದ್ರ ಅವರು ಪ್ರಸ್ತಾವಿಕ ಭಾಷಣ ಮಾಡಲಿದ್ದಾರೆ ಮಾಜಿ ಸಚಿವರಾದ ಎನ್.ಮಹೇಶ್ ವಿಷಯ ಮಂಡನೆ ಮಾಡುವವರು.ಮಾಜಿ ಸಚಿವರಾದ ಕೋಟೆ ಎಂ.ಶಿವಣ್ಣ, ಮಾಜಿ ಶಾಸಕರಾದ ಎಸ್.ಬಾಲರಾಜು, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರು, ಸಮತಾ ಸೈನಿಕ ದಳ ರಾಜ್ಯಾಧ್ಯಕ್ಷ ವೆಂಕಟಸ್ವಾಮಿ, ಪತ್ರಕರ್ತರಾದ ಶಿವಕುಮಾರ್ ಬೆಳ್ಳಿತಟ್ಟೆ ಅವರಿ ಅಭಿಪ್ರಾಯ ಮಂಡನೆ ಮಾಡಲಿದ್ದಾರೆ ಎಂದರು.
ಎಸ್ ಇಪಿ, ಟಿಎಸ್ ಪಿ ಅನುದಾನ ವಾಪಸ್ ಮಾಡುವವರೆಗೂ ಹೋರಾಟ: ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿರುವ ಎಸ್ಸಿ, ಎಸ್ ಟಿ ಅನುದಾನವನ್ನು ಇಲಾಖೆಗೆ ವಾಪಸ್ ನೀಡುವವರೆಗೂ ಸರ್ಕಾರದ ವಿರುದ್ದ ನಿರಂತರ ವಿಚಾರ ಸಂಕಿರಣ, ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಎಸ್ ಸಿಪಿ, ಟಿಎಸ್ ಪಿ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ ಮುಂದಿನ ದಿನಗಳಲ್ಲಿ ಮೀಸಲಾತಿಯನ್ನು ಕಿತ್ತುಕೊಳ್ಳುವುದರಲ್ಲಿ ಯಾವುದೇ ಅನುಮಾನ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ಮಾಡುವ ಕಡೆ ಗಮನ ಹರಿಸಬೇಕು ಎಂದರು.
ಪತ್ರಿಕಾಗೋಷ್ಢಿಯಲ್ಲಿ ಸಾಮಾಜಿಕ ನ್ಯಾಯ ಸಬಲೀಕರಣ ವೇದಿಕೆಯ ಮುಖಂಡರಾದ ಅಗರರಾಜು,ನಲ್ಲೂರು ಪರಮೇಶ್, ಮುತ್ತಿಗೆಮೂರ್ತಿ, ಜಗದೀಶ್, ಟಗರಪುರ ರೇವಣ್ಣ, ಪರಶಿವಯ್ಯ, ಹೊಂಗನೂರುಮಹದೇವಸ್ವಾಮಿ ಹಾಜರಿದ್ದರು.