ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಚಾ.ನಗರ ಜಿಲ್ಲೆ ಉತ್ತಮ ಸಾಧನೆ ತೋರಲಿ : ರಾಮಚಂದ್ರ ರಾಜೇ ಆರಸ್ ಆಶಯ

ಜೆಎಸ್‍ಎಸ್ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿ ಸಂಘದ ಸಮಾರೋಪ
ಚಾಮರಾಜನಗರ: ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶದ ರಾಜ್ಯ ಮಟ್ಟದಲ್ಲಿ ನಮ್ಮ ಜಿಲ್ಲೆಯು ಐದರೊಳಗಿನ ಪಟ್ಟಿಯಲ್ಲಿದ್ದು ಉತ್ತಮ ಸಾಧನೆ ಮಾಡಲು ನಿಮ್ಮೆಲ್ಲರ ಪರಿಶ್ರಮ ಅಗತ್ಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ತಿಳಿಸಿದರು.

ನಗರದ ಜೆ.ಎಚ್. ಪಟೇಲ್ ಜೆಎಸ್‍ಎಸ್ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜೆಎಸ್‍ಎಸ್ ಶಿಕ್ಷಣ ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಹಾಗೂ ನಮ್ಮ ಸಂಸ್ಕøತಿಯ ಪರಂಪರೆಯ ಬಗ್ಗೆ ಅರಿವು ಮೂಡಿಸಿ, ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸುತ್ತಿದೆ. ಸರ್ಕಾರ ಮಾಡಲಾಗದ ಸಾಧನೆಯನ್ನು ಜೆಎಸ್‍ಎಸ್ ಮಹಾವಿದ್ಯಾಪೀಠ ಮಾಡಿದೆ. ಶಿಕ್ಷಣ ಕ್ರಾಂತಿಯನ್ನು ಮಾಡುವ ಮೂಲಕ ಹಳೇ ಮೈಸೂರು ಪ್ರಾಂತ್ಯದಲ್ಲಿ ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ತಮ್ಮದೇ ಅದ ವಿಶಿಷ್ಟ ಸೇವೆಯನ್ನು ಸಲ್ಲಿಸುತ್ತಿದೆ. ಈ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ನೀವೆಲ್ಲರು ಪುಣ್ಯವಂತರು ಎಂದು ಪ್ರಶಂಸೆ ವÀ್ಯಕ್ತಪಡಿಸಿದರು.

ಡಯಟ್ ಕಾಲೇಜಿನ ಉಪ ಪ್ರಾಂಶುಪಾಲ ಲಿಂಗರಾಜೇ ಅರಸ್ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿ, ಶಿಕ್ಷಣ ವ್ಯಕ್ತಿತ್ವ ವಿಕಸನ ಮಾಡುತ್ತದೆ. ಪ್ರಬುದ್ದ ಮನುಷ್ಯನನ್ನಾಗಿ ರೂಪಿಸುತ್ತದೆ. ಶಿಕ್ಷಣ ಇಲ್ಲದ ವ್ಯಕ್ತಿ ಪ್ರಾಣಿಗಿಂತ ಕಡೆ. ಈ ನಿಟ್ಟಿನಲ್ಲಿ ಉತ್ತಮ ಶಿಕ್ಷಣವನ್ನು ಪಡೆದು, ತಂದೆ,ತಾಯಿ ಹಾಗೂ ಶಾಲೆಗೆ ಕೀರ್ತಿ ತರಬೇಕು. ಮೊದಲು ಗುರು ಹಿರಿಯರು ಹಾಗೂ ತಂದೆತಾಯಿಯನ್ನು ಗೌರವಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.

ನಾನು ಸಹ ಜೆಎಸ್‍ಎಸ್ ಶಾಲೆಯ ವಿದ್ಯಾರ್ಥಿ. ರಾಜೇಂದ್ರಶ್ರಿಗಳು ಹಾಗೂ ಈಗಿನ ಶ್ರೀಗಳು ಪರಿಶ್ರಮ ಹಾಗು ಆಶಯದ ಫಲವಾಗಿ ಉತ್ತಮ ಶಿಕ್ಷಣ ದೊರೆತು ನಾವೆಲ್ಲರು ನಿಮ್ಮ ಮುಂದೆ ನಿಲ್ಲುವಂತಾಗಿದೆ. ಜೆಎಸ್‍ಎಸ್ ಹಾಸ್ಟೆಲ್ ಹಾಗೂ ಶಾಲೆಯಲ್ಲಿ ಓದಿ ಈ ಪದವಿಗೆ ಬಂದಿದ್ದೇನೆ. ನೀವು ಸಹ ಇದೇ ರೀತಿ ವೇದಿಕೆಯಲ್ಲಿ ನಿಂತು ಮಾತನಾಡುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕಾದರೆ ಉತ್ತಮವಾಗಿ ವ್ಯಾಸಂಗ ಮಾಡಿ, ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಈಗ ನಿಮ್ಮ ಮುಂದೆ ಎರಡು ಬಾಗಿಲುಗಳಿವೆ. ಒಂದು ವಿದ್ಯೆ ಬಾಗಿಲು, ಮತ್ತೊಂದು ಸುಖದ ಬಾಗಿಲು. ನೀವು ವಿದ್ಯೆ ಬಾಗಿಲು ಆಯ್ಕೆ ಮಾಡಿಕೊಂಡರೆ, ಸುಖದ ಬಾಗಿಲು ತಾನಾಗಿಯೇ ತೆರೆದುಕೊಳ್ಳುತ್ತದೆ. ಹೀಗಾಗಿ ಈ ಅವಧಿಯಲ್ಲಿ ಕಷ್ಟಪಟ್ಟು ವ್ಯಾಸಂಗ ಮಾಡಿದರೆ, ಮುಂದೆ ಭವಿಷ್ಯ ಉತ್ತಮವಾಗಿರುತ್ತದೆ ಎಂದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಎಸ್‍ಎಸ್ ಅಕ್ಷರ ದಾಸೋಹ ಸಮಿತಿಯ ಅಧ್ಯಕ್ಷ ಆರ್. ಕುಮಾರಸ್ವಾಮಿ ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕ ಬಿ.ಎಂ. ಸಿದ್ದಪ್ಪ, ಸಹ ಶಿಕ್ಷಕರಾದ ಡಿ. ಶಿವಕುಮಾರ್, ಡಿ.ಜಿ. ರಾಜೇಂದ್ರ, ಪುಷ್ಪಲತಾ, ಭವಾನಿ ಪ್ರಸಾದ್, ಶೋಭಾ, ಶಿವಾನಂದ, ಉಮೇಶ್, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Leave a Reply

Your email address will not be published. Required fields are marked *