ಕಾವೇರಿ ಕಾವು : ಖಾಲಿ ಟಿನ್ ಗಳನ್ನ ಬಡಿದು ವಿನೂತನ ಪ್ರತಿಭಟನೆ

ಚಾಮರಾಜನಗರ: ರಾಜ್ಯ ಸರ್ಕಾರವು‌ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆಯಿಂದ ಪ್ರತಿಭಟನೆ ಮುಂದುವರೆದಿದ್ದು ಇಂದು ಕೂಡ ಖಾಲಿ ಟಿನ್ ಗಳನ್ನ ಬಡಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಖಾಲಿ ಟೀನ್ ಗಳನ್ನು ಹಿಡಿದು ಬಡಿಯುತ್ತಾ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ, ರಾಜ್ಯ ಹಾಗೂ ಕಾವೇರಿ ನಿರ್ವಾಹಣ ಮಂಡಳಿ , ತಮಿಳುನಾಡು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಿಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಸರ್ಕಾರ ಕಳೆದ ಇಪ್ಪತ್ತಾರು ದಿನಗಳಿಂದಲ್ಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಮೂಲಕ ಖಾಲಿ ಟೀನ್ ಆಗಿದೆ . ಕೂಡಲೇ ರಾಜ್ಯ ಸರ್ಕಾರ ನೀರನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟಬೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಮಹೇಶ್ ಗೌಡ, ನಿಜಧ್ವನಿ ಗೋವಿಂದರಾಜು, ರವಿಚಂದ್ರಪ್ರಸಾದ್ ಕಹಳೆ, ಲಿಂಗರಾಜು, ಚಾ.ಸಿ.ಸಿದ್ದರಾಜು, ವೀರಭದ್ರ, ತಾಂಡವಮೂರ್ತಿ, ಆಟೋ ನಾಗೇಶ್, ಶಿವು, ಚಾ.ಹ.ರಾಮು, ಗು.ಪುರುಷೋತ್ತಮ್, ಸೋಮವಾರಪೇಟೆ ಮಂಜು, ಕೆ.ಎಂ.ನಾಗರಾಜು, ಮುತ್ತುರಾಜು, ನಾಗರಾಜು ಮೂರ್ತಿ, ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *