ಕಾವೇರಿ ಕಿಚ್ಚು :  ಹೆದ್ದಾರಿ ತಡೆದು ಪ್ರತಿಭಟನೆ

ಚಾಮರಾಜನಗರ: ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ  67 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ  ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ನಗರದ  ಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ  ಜಮಾಯಿಸಿದ  ಪ್ರತಿಭಟನಾನಿತರು   ಅಲ್ಲಿಂದ ಮೆರವಣಿಗೆ  ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ   ರಾಷ್ಟ್ರೀಯ ಹೆದ್ದಾರಿಯಲ್ಲಿ ಟವಲು ಬಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,  ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 67 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ  ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ   ಸರ್ಕಾರಗಳು, ಕಾವೇರಿ ನೀರು‌ ನಿರ್ವಹಣಾ ಮಂಡಳಿ ಮೌನವಾಗಿದೆ. ಕೇಂದ್ರಸರ್ಕಾರ ಕೂಡಲೇ ಕಾವೇರಿ ನೀರು ನಿರ್ವಹಣಾ ಸಮಿತಿ ವಜಾಗೊಳಿಸಬೇಕು ಎಂದು ಆಗ್ರಹಿಸಿದರು..

ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು.ತಮಿಳುನಾಡಿಗೆ ನೀರು ನಿಲ್ಲಿಸುವ ತನಕ ಹೋರಾಟ ಮಾಡಲಾಗುವುದು ಎಂದರು.

ಪ್ರತಿಭಟನೆಯಲ್ಲಿ   ಶಾ.ಮುರಳಿ, ಪಣ್ಯದಹುಂಡಿ ರಾಜು,  ಚಾ.ವೆಂ.ರಾಜ್ ಗೋಪಾಲ್,   ಗು.ಪುರುಷೋತ್ತಮ್,  ರಾಚಪ್ಪ, ಆಲೂರುನಾಗೇಂದ್ರ,  ತಾಂಡವಮೂರ್ತಿ,ಚಾ.ಸಿ.ಸಿದ್ದರಾಜು  ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *