ಕೃಷ್ಣರಾಜನಗರ : ಮೈಸೂರು ಜಿಲ್ಲೆಯ ಸಾಲಿಗ್ರಾಮದ ಆಂದೋಲನ ದಿನಪತ್ರಿಕೆಯ ಪ್ರತಿನಿಧಿ ಹಾಗೂ ಕರ್ನಾಟಕ ಪ್ರೆಸ್ ಕ್ಲಬ್ ನ ಕೃಷ್ಣರಾಜನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಅವರನ್ನು ಶಾಸಕ ಡಿ.ರವಿಶಂಕರ್ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಹಿರಿಯ ಕಾರ್ಯದರ್ಶಿ ಸಂದೇಶ್, ಸಾಲಿಗ್ರಾಮ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಹಂಸವೇಣಿ, ಮೈಸೂರಿನ ಕೆ.ಆರ್.ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ.ಮಂಜುನಾಥ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಜಿಲ್ಲಾ ಸಂಯೋಜಕ ಜವಹಾರ ಮುಗ್ಗನವರ, ಸಾಲಿಗ್ರಾಮದ ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಲಿ. ಅಧ್ಯಕ್ಷ ಕೆ.ಆರ್.ಶ್ಯಾಮ್ ಸುಂದರ್, ಸಾಲಿಗ್ರಾಮ ಗ್ರಾ.ಪಂ. ಪಿಡಿಓ ಮಂಜುನಾಥ್ ಸೇರಿದಂತೆ ಹಲವರು ಇದ್ದರು.