ಚಾಮರಾಜನಗರ: 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮ ಪಂಚಾಯಿತಿ, ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಮ ಪಂಚಾಯಿತಿ, ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರು ಗ್ರಾಮ ಪಂಚಾಯಿತಿ, ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಯಳಂದೂರು ತಾಲೂಕಿನ ಅಂಬಳೆ ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿವೆ.
ಪ್ರಶಸ್ತಿಗೆ ಆಯ್ಕೆಯಾದ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ 2ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಆಯೋಜಿಸಲಾಗಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.