ಚಂದಕವಾಡಿ ಗ್ರಾ.ಪಂ.ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಚಾಮರಾಜನಗರ: ತಾಲೂಕಿನ ಚಂದಕವಾಡಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸುವರ್ಣ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ನಟರಾಜು ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಷಾರ್ಚನೆ ಮಾಡಿ ಮಾತನಾಡಿ, ಕನ್ನಡನಾಡು, ನುಡಿಗಾಗಿ ಹೋರಾಟ ಮಾಡಿದ ಮಹನೀಯರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ರಾಜೇಶ್ವರಿ, ಸದಸ್ಯರಾದ ಮಹೇಶ್, ಮಹದೇವಪ್ಪ, ಜ್ಯೋತಿ, ತಾಜೀಂಬೇಬಿ, ಚಿನ್ನಸ್ವಾಮಿ, ಪಿಡಿಓ ಎಂ.ಸಿದ್ದರಾಜು, ಕಾರ್ಯದರ್ಶಿ ಮಾದಪ್ಪ, ಎಸ್‌ಡಿಎ ರಾಜೇಶ್ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *