ಚಾಮರಾಜನಗರ: ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿರುವ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದಲ್ಲಿ ಇಂದು(ಶನಿವಾರ) ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ನಗರದ ವರ್ತಕರ ಭವನದಲ್ಲಿ ಇಂದು ಬೆಳಿಗೆ 9.30 ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಡಿವಿಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದು, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಎಚ್.ಎಂ.ಗಣೇಶಪ್ರಸಾದ್ ಪ್ರಶಸ್ತಿ ಪ್ರದಾನ ಮಾಡುವರು.
ವಿವಿಧ ಕ್ರೀಡಾಕೂಟಗಳಲ್ಲಿ ಜಯಗಳಿಸಿದ ಪತ್ರಕರ್ತರು, ಅವರ ಕುಟುಂಬ ಸದಸ್ಯರು ಹಾಗೂ ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಬಹುಮಾನ ವಿತರಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ವರ್ತಕರ ಸಂಘದ ಅಧ್ಯಕ್ಷ ರಾಜಶೇಖರ್ ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಹಾಗೂ ಜಿಲ್ಲೆಯ ಪತ್ರಕರ್ತರು ಆಗಮಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಗೌಡಹಳ್ಳಿ ಮಹೇಶ್ ಕೋರಿದ್ದಾರೆ.