ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಉಪ ಸಮಿತಿಯಿಂದ ಅಕ್ಟೋಬರ್ 15 ರಿಂದ 23 ರವರೆಗೆ ವಿವಿಧ ಕಲಾ ಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ಹಾಗೂ ಇತರ ವೇದಿಕೆಗಳಲ್ಲಿ ಆಯೋಜಿಸಲಿದ್ದು, ಕಲಾವಿದರು/ಕಲಾ ತಂಡಗಳಿAದ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಸೆಪ್ಟೆಂಬರ್ 13 ರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ 0821-2513225 ಗೆ ಸಂಪರ್ಕಿಸಬಹುದು ಎಂದು ಮೈಸೂರು ದಸರಾ ಮಹೋತ್ಸವದ ಸಾಂಸ್ಕೃತಿಕ ಉಪ ಸಮಿತಿ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.