ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವ-2023 ಅಂಗವಾಗಿ ಸಾಂಸ್ಕøತಿಕ ಸಮಿತಿಯ ಮೂಲಕ ಅಕ್ಟೋಬರ್ 17 ರಿಂದ 20 ರವರೆಗೆ ದಸರಾ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಈ ಕಾರ್ಯಕ್ರಮಗಳಿಗೆ ಮೆರವಣಿಗೆ ಕಲಾತಂಡ, ಪೌರಾಣಿಕ ನಾಟಕ, ಜನಪದ ಹಾಡುಗಾರಿಕೆ, ಸುಗಮ ಸಂಗೀತ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 6ರೊಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಚಾಮರಾಜನಗರ ದಸರಾ ಸಾಂಸ್ಕøತಿಕ ಉಪ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಚಾಮರಾಜನಗರ ದಸರಾ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಯವರಾದ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.