ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಬೇರಿ: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಚಾಮರಾಜನಗರ: ಪಂಚರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇ± ಹಾಗೂ ಛತ್ತಿಸ್‍ಗಡ್ ರಾಜ್ಯಗಳಲ್ಲಿ ಬಿಜೆಪಿ ಪ್ರಪಂಚ ಬಹುಮತ ಪಡೆದು ಗೆಲುವು ಸಾಧಿಸುತ್ತಿದ್ದಂತೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಾಯಂಕಾಲ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಣೆ ಮಾಡಿದರು.

ನಗರದ ಭುವನೇಶ್ವರಿ ವೃತ್ತದಲ್ಲಿ ಜಯಾಯಿಸಿದ ಬಿಜೆಪಿ ಕಾರ್ಯಕರ್ತರು ಹಾಗು ಮುಖಂಡರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧಪಕ್ಷದ ನಾಯಕ ಆಶೋಕ್, ಅಮಿತಾ ಷಾ ಪರ ಘೋಷಣೆಗಳನ್ನು ಕೂಗಿದರು. ಬಳಿಕ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪ್ರಶಿಕ್ಷಣ ವರ್ಗದ ರಾಜ್ಯ ಸಮಿತಿ ಸದಸ್ಯ ಎಸ್. ಬಾಲಸುಬ್ರಮಣ್ಯ ಮಾತನಾಡಿ, ಪಂಚ ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯನ್ನು ವಿರೋಧ ಪಕ್ಷಗಳು ಸೆಮಿಫೈನಲ್ ಎಂದೇ ಬಿಂಬಿಸಿದ್ದವು. ಐದು ರಾಜ್ಯಗಳಲ್ಲಿ ಬಿಜೆಪಿ ಸೋಲುತ್ತದೆ ಎಂದು ಬೊಬ್ಬೆ ಹೊಡೆಯುತ್ತಿದ್ದರು. ಆದರೆ, ಈಗ ಫಲಿತಾಂಶ ಪ್ರಕಟವಾಗಿದ್ದು, ನಾಲ್ಕು ರಾಜ್ಯಗಳ ಪೈಕಿ ತೆಲಂಗಾಣ ಹೊರತು ಪಡಿಸಿ ಇನ್ನು ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರಪಂಚ ಬಹುಮತವನ್ನು ಗಳಿಸಿ, ಅಧಿಕಾರವನ್ನು ಸ್ಥಾಪಿಸಲು ಮುಂದಾಗಿದೆ. ದೇಶಕ್ಕೆ ಮತ್ತೇ ನರೇಂದ್ರ ಮೋದಿ ಅವರು ಬೇಕು ಎಂದು ಆ ರಾಜ್ಯಗಳ ಮತದಾರರ ಪ್ರಭುಗಳು ತೀರ್ಪು ನೀಡಿದ್ದಾರೆ ಎಂದರು.

ಹೀಗಾಗಿ ಲೋಸಕಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದ ಎನ್‍ಡಿಎಗೆ 400ಕ್ಕು ಹೆಚ್ಚು ಸ್ಥಾನಗಳು ಲಭಿಸಲಿದ್ದು, ವಿಶ್ವ ನಾಯಕ ನರೇಂದ್ರ ಮೋದಿ ಮತ್ತೇ ಪ್ರಧಾನಿಯಾಗಲಿದ್ದಾರೆ. ಇದನ್ನು ಯಾರಿಂದಲು ತಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿಯೂ ಸಹ ಈ ಫಲಿತಾಂಶ ಬಿಜೆಪಿ ಸಂಘಟನೆಗೆ ಹೆಚ್ಚಿನ ಬಲವನ್ನು ತಂದು ಕೊಟ್ಟಿದೆ. ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್. ಅಶೋಕ್ ಅವರ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗುತ್ತಿದೆ ಎಂದರು.

ರಾಜ್ಯದ ಜನರು ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಏಕಪ್ಪಾ ಗೆಲ್ಲಿಸಿದೆವು ಎಂಬ ಭಾವನೆಯಲ್ಲಿ ಇದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ. ರಾಜ್ಯದ ಖಜಾನೆಯನ್ನು ಖಾಲಿ ಮಾಡಿ, ತೆರಿಗೆದಾರರಿಗೆ ಮತ್ತಷ್ಟು ಹೊರೆ ಮಾಡಿ, ಸಾಮಾನ್ಯ ಜನರು ಹಾಗು ಮಧ್ಯಮ ವರ್ಗಗಳನ್ನು ಸುಲಿಕೆ ಮಾಡುತ್ತಿವೆ. ಎಲ್ಲರ ಅಭಿವೃದ್ದಿ ದೇಶದ ಪ್ರಗತಿ ಎಂದು ಭಾವಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನಪರ ಯೋಜನೆಗಳು ದೇಶದ ಅಭಿವೃದ್ದಿಗೆ ಪೂರಕವಾಗಿದೆ. ಹೀಗಾಗಿ ಮತ್ತೇ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಾಲಸುಬ್ರಮಣ್ಯ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯ ನಟರಾಜು, ಹಿಂದುಳಿದ ಮೋರ್ಚಾ ಗ್ರಾಮಾಂತರ ಘಟಕದ ಅಧ್ಯಕ್ಷ ತಾವರಕಟ್ಟೆ ಮೋಳೆ ಮಹೇಶ್, ನಗರಸಭಾ ಮಾಜಿ ಅಧ್ಯಕ್ಷ ಮಹದೇವನಾಯಕ, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ರಾಮಸಮುದ್ರ ಶಿವಣ್ಣ, ಮಾಧ್ಯಮ ಜಿಲ್ಲಾ ಸಂಚಾಲಕ ಮಂಜುನಾಥ , ಮುಖಂಡರಾದ ಆರ್. ಪುಟ್ಟಮಲ್ಲಪ್ಪ, ಗ್ರಾ.ಪಂ. ಸದಸ್ಯ ಮಹೇಶ್, ರಂಗಸ್ವಾಮಿ(ಪಾಪು), ಬೊಲೆಟ್ ಚಂದ್ರ, ಆನಂದ್, ಭಗೀರಥ, ಬಿ. ರಾಜಪ್ಪ, ಎಪಿಎಂಸಿ ಅಧ್ಯಕ್ಷ ಮನೋಜ್ ಪಟೇಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *