ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಾಮರಾಜನಗರ: 2023-24ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ವೃತ್ತಿಪರ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 22ರವರೆಗೆ ವಿಸ್ತರಿಸಲಾಗಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ಆದಾಯ 2.50 ಲಕ್ಷ ರೂ. ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವಿದ್ಯಾರ್ಥಿಗಳ ಪೋಷಕರ ಆದಾಯ 1 ಲಕ್ಷ ರೂ. ಮಿತಿಯೊಳಗಿರಬೇಕು.

ಅರ್ಜಿಗಳನ್ನು ವೆಬ್‍ಸೈಟ್ https://shp.karnataka.gov.in ಮೂಲಕ ಡಿಸೆಂಬರ್ 22ರೊಳಗೆ ಸಲ್ಲಿಸಬೇಕು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲಾತಿಗಳ ವಿವರ ಹಾಗೂ ಸರ್ಕಾರದ ಆದೇಶಕ್ಕಾಗಿ ಇಲಾಖೆ ವೆಬ್‍ಸೈಟ್ http://bcwd.karnataka.gov.inನಲ್ಲಿ ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ. 08226-222180 ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *