ಮೊಬೈಲ್ ರಿಪೇರಿ, ಸಿಸಿಟಿವಿ ಕ್ಯಾಮರಾ ಅಳವಡಿಕೆ ಉಚಿತ ತರಬೇತಿ

ಚಾಮರಾಜನಗರ: ಎಸ್.ಬಿ.ಐ. ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ನಿರುದ್ಯೋಗಿಗಳಿಗೆ ಉಚಿತವಾಗಿ ಮೊಬೈಲ್ ರಿಪೇರಿ ಮತ್ತು ಸಿಸಿ ಟಿವಿ ಕ್ಯಾಮರಾ ಅಳವಡಿಕೆ ತರಬೇತಿಯನ್ನು ನೀಡಲಾಗುತ್ತದೆ.

ಅಕ್ಟೋಬರ್ 30 ರಿಂದ 30 ದಿನಗಳ ಕಾಲ ಮೊಬೈಲ್ ರಿಪೇರಿ ಹಾಗೂ 13 ದಿನಗಳ ಕಾಲ ಸಿಸಿಟಿವಿ ಕ್ಯಾಮರಾ ಅಳವಡಿಕೆ ತರಬೇತಿಯನ್ನು ಮಾದಾಪುರದ ಸಮಾಜ ಕಲ್ಯಾಣ ಇಲಾಖೆಯ ಕಟ್ಟದಲ್ಲಿ ಉಚಿತವಾಗಿ ನೀಡಲಾಗುವುದು. ಅಭ್ಯರ್ಥಿಗಳು 18 ರಿಂದ 45 ವರ್ಷದವರಾಗಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಹೊಂದಿರಬೇಕು. ಆಸಕ್ತರು ಅಕ್ಟೋಬರ್ 28ರೊಳಗೆ ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರುವ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 08226-200214, ಮೊ.ಸಂ 9606098878 ಸಂಪರ್ಕಿಸುವಂತೆ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *