ಚಾಮರಾಜನಗರ: ಮಂಗಳವಾರ- ತಾಲೂಕಿನ ಹುರುಳಿ ನಂಜನಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಗತ್ ಯುವ ಸೇನೆ ಹಾಗೂ ಸ್ವಾಮಿ ವಿವೇಕಾನಂದ ಯುವಕ ಸಂಘದ ವತಿಯಿಂದ ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.
.ಇದೇ ಸಂದರ್ಭದಲ್ಲಿ ಭಗತ್ ಸಿಂಗ್ ಯುವಸೇನೆ ಅಧ್ಯಕ್ಷ ಕಾಂತರಾಜು ಮಾತನಾಡಿ ಇಂದು ದೇಶದೆಲ್ಲೆಡೆ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಅವರ ಜನ್ಮದಿನ ಸಂದರ್ಭದಲ್ಲಿ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಗಿದ್ದು, ಓದುವುದರ ಜೊತೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಿನೋದ.ಎನ್,ಮಾನ್ವಿತ್, ನಂಜಮಣಿ ಇತತರು ಇದ್ದರು.
