ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಹಕ್ಕು ಚಲಾಯಿಸಿ : ಮರಿತಿಬ್ಬೇಗೌಡ ಮನವಿ

ಚಾಮರಾಜನಗರ: ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪರಿಷ್ಕರಣೆ ಆಯಾ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿದ್ದು, ಶಿಕ್ಷಕರು ತಪ್ಪದೇ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೊಂದಾಯಿಸಿಕೊಂಡು ತಮ್ಮ ಹಕ್ಕು ಚಲಾಯಿಸಬೇಕೆಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಮನವಿ ಮಾಡಿದರು.

ನಗರದ ಡಯಟ್ ಕಾಲೇಜಿಗೆ ಭೇಟಿ ನೀಡಿದ ಅವರು, ಅಲ್ಲಿನ ಶಿಕ್ಷಕ ಬಂಧುಗಳನ್ನು ಭೇಟಿ ಮಾಡಿ ಶಿಕ್ಷಕರ ಕ್ಷೇತ್ರದ ಚುನಾವಣಾ ಅಧಿಸೂಚನೆ ಹೊರಡಿಸುವ ಮುನ್ನಾ ಮತದಾರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಶಿಕ್ಷಕರು ತಮ್ಮ ಹೆಸರು ನೋಂದಾಯಿಸಿಕೊಂಡು ಖಾತರಿ ಪಡಿಸಿಕೊಳ್ಳಬೇಕು ಎಂದು ಹೇಳುವ ಜೊತೆಗೆ ನಾಲ್ಕನೇ ಬಾರಿಯು ಸಹ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ. ಶಿಕ್ಷಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ನನಗೆ ಪ್ರಥಮ ಪ್ರಾಶಸ್ತ್ಯ ಮತಗಳನ್ನು ನೀಡಿ, ತಮ್ಮೆಲ್ಲರ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.

ಶಿಕ್ಷಕರು ಹಾಗೂ ಶಿಕ್ಷಕರ ಸಂಘಟನೆಗಳೊಂದಿಗೆ ನಿಕಟ ಸಂಪರ್ಕವನ್ನು ಹೊಂದಿ. ಅವರ ದುಃಖದುಮ್ಮಾನಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಿದ್ದೇನೆ. ಸರ್ಕಾರ ಹಾಗು ಇಲಾಖಾ ಮಟ್ಟದಲ್ಲಿ ಶಿಕ್ಷಕರ ಕುಂದುಕೊರತೆಗಳನ್ನು ಬಗೆರಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಇನ್ನು ಮೊನ್ನೆ ನಡೆದ ಬೆಳಗಾವಿ ಅಧೀವೇಶನದಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಸಚಿವರು ಹಾಗೂ ಸದನ ಗಮನ ಸೆಳೆದು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನ್ಮುಖಓನಾಗಿದ್ದೇವೆ. ಬಹಳಷ್ಟು ಸಮಸ್ಯೆಗಳಿಗೆ ಪರಿಹರಿಸ ಕಲ್ಪಿಸುವ ಜೊತೆಗೆ ಶಿಕ್ಷಕರಿಗೆ ಹೊರೆಯಾಗುತ್ತಿದ್ದ ಇತರೇ ಇಲಾಖೆಗಳ ಜವಾಬ್ದಾರಿಯನ್ನು ಕಡಿತಗೊಳಿಸಿ, ನೆಮ್ಮದಿ ಹಾಗೂ ಗೌರವಯುತವಾಗಿ ಶಿಕ್ಷಕ ವೃತ್ತಿಯನ್ನು ಮಾಡುವಂತಹ ವಾತಾವರಣವನ್ನು ಕಲ್ಪಿಸಿಕೊಟ್ಟಿದ್ದೇನೆ. ಅಧಿವೇಶನದಲ್ಲಿ ನಾನು ಚರ್ಚೆ ಮಾಡಿರುವ ವಿಚಾರಗಳು ಬರುತ್ತಿವೆ. ನಿಮ್ಮ ಬಿಡುವಿನ ವೇಳೆಯಲ್ಲಿ ಯೂಟ್ಯೂಬ್‍ನಲ್ಲಿ ನೋಡಿ ಎಂದು ಮರಿತಿಬ್ಬೇಗೌಡ ತಿಳಿಸಿದರು.

ಈ ಸಂದರ್ಭದಲ್ಲಿ ಡಯಟ್ ಕಾಲೇಜಿನ ಪ್ರಾಂಶುಪಾಲ ಕಾಶೀನಾಥ್, ಬಿಆರ್‍ಸಿ ರಾಜೀವ್ ಹೀಗಾಗಿ ಮತ್ತೊಂದು ಅವಕಾಶವನ್ನು

Leave a Reply

Your email address will not be published. Required fields are marked *