ಸಮಾಜ ಕಲ್ಯಾಣ ಇಲಾಖೆಯ ಡಿಡಿ ಸಿ.ಮಲ್ಲಿಕಾರ್ಜುನ ಅವರಿಗೆ ಸನ್ಮಾನ

ಚಾಮರಾಜನಗರ: ಮಹಾರಾಷ್ಟ್ರದ ನಾಗಪುರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್‌ರವರ ದೀಕ್ಷಾಭೂಮಿಯಾತ್ರೆಯು ಯಶ್ವಸಿಗೊಂಡ ಹಿನ್ನಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿ.ಮಲ್ಲಿಕಾರ್ಜುನ ಅವರನ್ನು ನಗರದ ಜಿಲ್ಲಾಡಳಿತ ಭವನದಲ್ಲಿ ದಲಿತ ಸಂಘರ್ಷ ಸಮಿತಿ ಡಿ.ಜಿ.ಸಾಗರ ಬಣದ ವತಿಯಿಂದ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಸಿ.ಮಲ್ಲಿಕಾರ್ಜುನ ಮಾತನಾಡಿ, ಮಹಾರಾಷ್ಟçದ ನಾಗಪುರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್‌ರವರ ದೀಕ್ಷಾಭೂಮಿಯಾತ್ರೆ ಪೂರ್ಣಗೊಳಿಸಿ ಬಂದಿರುವ ಎಲ್ಲಾ ಯಾತ್ರಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳನ್ನು ಪಾಲಿಸಬೇಕು. ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಯೋಜಕ ಸಿ.ಎಂ.ಶಿವಣ್ಣ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್‌ರವರ ದೀಕ್ಷಾಭೂಮಿಯಾತ್ರೆ ಯಶ್ವಸಿಗೆ ಶ್ರಮಿಸಿದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿ.ಮಲ್ಲಿಕಾರ್ಜುನ ಅವರನ್ನು ನಮ್ಮ ಸಂಘಟನೆ ವತಿಯಿಂದ ಸನ್ಮಾನಿಸಲಾಗಿದೆ. ಮುಂದಿನ ವರ್ಷವೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಕಂದಹಳ್ಳಿ ನಾರಾಯಣ್, ಆಟೋ ಉಮೇಶ್, ಮಂಜೇಶ್, ಸಚಿನ್, ಮುರುಗೇಶ್, ಖಾರಯ್ಯ, ಉಮೇಶ್, ಮಹೇಶ್ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *