ಸರ್ಕಾರಿ ವಸತಿಯುತ ಪ್ರಥಮ ದರ್ಜೆ ಕಾಲೇಜಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ, ಪರಿಶೀಲನೆ

ಚಾಮರಾಜನಗರ: ಬೋಗಾಪುರ ಗ್ರಾಮದ ಸಮೀಪದ ಸರ್ಕಾರಿ ವಸತಿಯುತ ಪ್ರಥಮ ದರ್ಜೆ ಕಾಲೇಜಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ ನಿರ್ಮಾಣಗೊಂಡಿರುವ ಕಾಲೇಜಿನ ಕೂಠಡಿಗಳನ್ನು ಪರಿಶೀಲಿಸಿದರು.

೨೬.೬೫ ಕೋಟಿ ರೂ. ವೆಚ್ಚದಲ್ಲಿ ಕಾಲೇಜಿನ ಶೈಕ್ಷಣಿಕ ವಿಭಾಗದ ಕಟ್ಟಡಗಳ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಶಾಸಕರು, ಕಾಲೇಜಿನ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾಲೇಜು ಕೊಠಡಿಗಳು, ಪ್ರಯೋಗಾಲಯ, ವಸತಿ ಸಮುಚ್ಛಯ, ಭೋದನಾ ಕೊಠಡಿ, ಆಡಿಟೋರಿಯಂ, ಪ್ರಾಂಶುಪಾಲರು ಹಾಗೂ ವಿಭಾಗದ ಮುಖ್ಯಸ್ಥರ ಕೊಠಡಿಗಳು, ಅಡುಗೆ ಮನೆ, ಬೋಜನಾಲಯ, ಶೌಚಾಲಯಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಚಾಮರಾಜನಗರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸುಸಜ್ಜಿತ ಕೊಠಡಿಗಳು, ನುರಿತ ಭೋಧಕ ವರ್ಗ ಸೇರಿದಂತೆ ಹಲವು ಮೂಲ ಸೌಲಭ್ಯಗಳನ್ನು ಕಲ್ಪಿಸಿದ್ದು ವಿದ್ಯಾರ್ಥಿಗಳು ಇದನ್ನು ಸದ್ಭಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ.ಪಿ.ದೇವರಾಜು, ಎಪಿಎಂಸಿ ಅಧ್ಯಕ್ಷ ಮಾಜಿ ಅಧ್ಯಕ್ಷ ನಾಗೇಂದ್ರ, ತಾ.ಪಂ ಮಾಜಿ ಸದಸ್ಯ ಮಹಾಲಿಂಗು, ಮಧು, ಎಇಇ ತನುಜಕುಮಾರ್, ಇಂಜಿನಿಯರ್ ಪ್ರಜ್ವಲ್ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *