ಚಾಮರಾಜನಗರ: ತಾಲೂಕಿನ ಉಮ್ಮತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸೆ. 22 ರಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.
ಗ್ರಾಮದ ಸಂಘದ ಕಾರ್ಯಾಲಯದಲ್ಲಿ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶ್ರೀಕಂಠಸ್ವಾಮಿ ವಹಿಸಲಿದ್ದು, ಸಂಘದ ಸರ್ವ ಸದಸ್ಯರು ಸಕಾಲಕ್ಕೆ ಆಗಮಿಸಿ ಮಹಾಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನಂದೀಶ್ ವಿ.ಎಸ್. ಪ್ರತಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.