ಹಳೇ ಕಬ್ಬಿಣ,ಪೇಪರ್, ಖಾಲಿ ಸೀಸ  ಪ್ರದರ್ಶಿಸಿ ವಿನೂತನ ಪ್ರತಿಭಟನೆ

ಕೇಂದ್ರ, ರಾಜ್ಯ ಸರ್ಕಾರ  ಗುಜರಿ ಸರ್ಕಾರ ಎಂದು ಘೋಷಣೆ ಕೂಗಿ ಅಕ್ರೋಶ
ಚಾಮರಾಜನಗರ: ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 1 ತಿಂಗಳಿನಿಂದಲೂ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ಮುಂದುವರೆದಿದ್ದು ಗುಜರಿ ವಸ್ತುಗಳಾದ ಹಳೇ ಕಬ್ಬಿಣ, ಪೇಪರ್, ಖಾಲಿ ಸೀಸಗಳನ್ನು ಹಿಡಿದು  ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ  ಚಾ.ರಂ.ಶ್ರೀನಿವಾಸಗೌಡ, ಶಾ.ಮುರಳಿ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು  ಅಲ್ಲಿಂದ ಮೆರವಣಿಗೆ ಹೊರಟು  ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿದರು.

ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರು, ಕನ್ನಡಿಗರ ಪಾಲಿಗೆ ಗುಜರಿ ಸರ್ಕಾರಗಳಾಗಿವೆ ಎಂಬುದನ್ನು ತೋರಿಸಲು ಮುರುಕಲು ಸೈಕಲ್, ಹಳೇ ಕಬ್ಬಿಣ, ಖಾಲಿ ಸೀಸೆಗಳನ್ನು ಹಿಡಿದು  ಪ್ರತಿಭಟಿಸಿ ಅಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ. ಶಾ.ಮುರಳಿ ಮಾತನಾಡಿ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ ಹಾಗೂ ಕೇಂದ್ರ ಸರ್ಕಾರ,  ಗುಜರಿ ಸರ್ಕಾರಗಳಾಗಿವೆ. ರಾಜ್ಯದ ಜನರ ಹಿತ ಕಾಯದೇ ನಿರಂತರವಾಗಿ ನೀರು ಹರಿಸುತ್ತಿರುವ ಕರ್ನಾಟಕ ಸರ್ಕಾರ, ಮಾತನಾಡದ ಜನಪ್ರತಿನಿಧಿಗಳು, ಮಧ್ಯಸ್ಥಿಕೆ ವಹಿಸದ ಕೇಂದ್ರ ಸರ್ಕಾರ, ಕಾವೇರಿ ಕ್ಯಾತೆ ತೆಗೆಯುವ ತಮಿಳುನಾಡು ಸರ್ಕಾರ ಯಾವುದಕ್ಕೂ ಉಪಯೋಗಕ್ಕೆ ಬಾರದ ಗುಜರಿ ಸರ್ಕಾರಗಳಾಗಿವೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ರವಿಚಂದ್ರಪ್ರಸಾದ್ ಕಹಳೆ, ಮಹೇಶ್ ಗೌಡ, ,ಗು.ಪುರುಷೋತ್ತಮ್,  ಲಿಂಗರಾಜು, ತಾಂಡವಮೂರ್ತಿ, ಸೋಮವಾರಪೇಟೆ ಮಂಜು ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *