ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಚರ್ಚಿಸಲು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 12ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಸಿದ್ದತಾ ಸಭೆಯನ್ನು ಏರ್ಪಡಿಸಲಾಗಿದೆ.

ಸಭೆಗೆ ಪರಿಶಿಷ್ಟ ವರ್ಗದ, ಇತರೆ ಜನಾಂಗದ ಮುಖಂಡರು, ಎಲ್ಲಾ ಸಂಘಸಂಸ್ಥೆಗಳ ಪದಾಧಿಕಾರಿಗಳು, ಮುಖ್ಯಸ್ಥರು, ಜನಪ್ರತಿನಿಧಿಗಳು, ಸಾರ್ವಜನಿಕರು ಭಾಗವಹಿಸಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಸಲಹೆ, ಸೂಚನೆ ನೀಡುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಮಂಜುಳ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.