ಮೈಸೂರು: ಬರಗಾಲದ ಈ ಸಂದರ್ಭದಲ್ಲಿ ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ತಳಮಟ್ಟದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ನಗರದ ಮೈಸೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಭಿವೃದ್ದಿ ಕಾರ್ಯಗಳು ಕುಂಠಿತವಾಗದoತೆ ಪರಸ್ಪರ ಇಲಾಖೆಗಳ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ಎಚ್ಚರವಹಿಸಿ. ಈ ತಿಂಗಳ ಒಳಗೆ ಕುಡಿಯುವ ನೀರಿನ ಟೆಂಡರ್ ಸಂಪೂರ್ಣಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ, 2019-20 ನೇ ಸಾಲಿನಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸಂಪೂರ್ಣವಾಗಿ ಪೂರ್ಣಗೊಳ್ಳಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಕಾರ್ಯಕೈಗೊಳ್ಳಬೇಕು. ತಾಲೂಕುಗಳಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕು. ಜೊತೆಗೆ ಮೇವಿನ ಬೆಳವಣಿಗೆ ಸಂಬoಧಿಸಿದoತೆ ಜನರಿಗೆ ಮಾಹಿತಿಯನ್ನು ನೀಡಿ ಬೆಳವಣಿಗೆ ಅಭಿವೃದ್ಧಿಪಡಿಸುವಂತೆ ತಿಳಿಸಬೇಕು ಎಂದರು.
ಗ್ರಾಮೀಣ ವಿಭಾಗಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಗ್ರಾಮೀಣ ಜನತೆಗಳನ್ನು ಒಳಗೊಂಡು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಉದ್ಯೋಗವನ್ನು ಒದಗಿಸಬೇಕು. ಕುಡಿಯುವ ನೀರಿನ ಯೋಜನೆಗೆ ಸಂಬoಧಿಸಿದoತೆ ಮೈಸೂರು ಜಿಲ್ಲೆಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು ಯೋಜನೆಗೆ ಬೇಕಿರುವ ಅಗತ್ಯ ಕ್ರಮಗಳನ್ನು ಕೈಗೊಂಡು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕಾವೇರಿ ಮತ್ತು ಕಬಿನಿ ಜಲಾಶಯ ಪ್ರದೇಶಗಳಿಂದ ಸರಬರಾಜಾಗುತ್ತಿರುವ ನೀರನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ ನೀರಿನ ಸಮಸ್ಯೆ ಆಗದಂತೆ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಸರ್ಕಾರದ ಪ್ರಮುಖ ಯೋಜನೆಗಳಾದ 5 ಗ್ಯಾರಂಟಿಗಳ ಕುರಿತು ಮಾತನಾಡಿ ಗೃಹಲಕ್ಷ್ಮಿ ಯೋಜನೆಗೆ ಸಂಬoಧಿಸಿದoತೆ 70% ರಷ್ಟು ಫಲಾನುಭವಿಗಳಿಗೆ ಡಿ ಬಿ ಟಿ ಮೂಲಕ ಹಣ ವರ್ಗಾವಣೆಯಾಗಿದೆ. ಇನ್ನುಳಿದ ಫಲಾನುಭವಿಗಳ ಖಾತೆಗಳಲ್ಲಿನ E-KYC ಸಂಬoಧಪಟ್ಟ ಸಮಸ್ಯೆಗಳಿಂದ ಹಣ ವರ್ಗಾವಣೆಯಲ್ಲಿ ಸಮಸ್ಯೆಯಾಗಿದೆ. ಸಂಭoದಿತ ಫಲಾನುಭವಿಗಳ ಮಾಹಿತಿಯನ್ನು ಪಡೆದು ತಿಳಿಸಲಾಗಿದೆ. ಇದರ ಕುರಿತು ಅಧಿಕಾರಿಗಳಿಗೆ ತಿಳಿಸಿ ಸೂಕ್ತ ಕ್ರಮವನ್ನು ಕೈಗೊಂಡು ಕೆಲವು ದಿನಗಳಲ್ಲಿ ಡಿ.ಬಿ.ಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದರು.
ನೊಂದಣಿಯಾಗಿರುವ ಫಲಾನುಭವಿಗಳಲ್ಲಿ ಕೆಲವು ಫಲಾನುಭವಿಗಳ E-KYC ಸಮಸ್ಯೆಗೆ ಸಂಬoಧಿಸಿದoತೆ ದೂರವಾಣಿ ಸಂಖ್ಯೆ ಕೊರತೆ ಇರುವುದರಿಂದ ಡಿಬಿಟಿ ಮೂಲಕ ಹಣ ವರ್ಗಾವಣೆಯನ್ನು ಮಾಡಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಅನ್ನಭಾಗ್ಯ ಯೋಜನೆಗೆ ಸಂಬoಧಿಸಿದoತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಪಡಿತರ ವಿತರಣೆಗೊಂಡಿದ್ದು, ಸರ್ಕಾರ ಆದೇಶದಂತೆ 5 ಕೆಜಿಗೆ ಪಡಿತರ ಬದಲು ಹಣ ನೀಡುತ್ತಿರುವ ಕಾರ್ಯಕ್ರಮವು ಮುಂದುವರಿಯುತ್ತಿದೆ. ಸೆಪ್ಟೆಂಬರ್ ತಿಂಗಳ ನೇರನಗದು ವರ್ಗಾವಣೆಯು ಬಾಕಿ ಉಳಿದಿದ್ದು, ಮುಂದಿನ ದಿನಗಳಲ್ಲಿ ಹಣ ಬಿಡುಗಡೆಯಾದ ತಕ್ಷಣ ವರ್ಗಾಯಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ 9.8 ಲಕ್ಷ ಜನರು ಅರ್ಜಿಯನ್ನು ಸಲ್ಲಿಸಿದ್ದು, ಅರ್ಹ ಫಲಾನುಭವಿಗಳಿಗೆ ಈಗಾಗಲೇ ಯೋಜನೆಯ ಸೌಲಭ್ಯ ದೊರೆಯುತ್ತಿದೆ. 200 ಯೂನಿಟ್‌ಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡುತ್ತಿರುವ ಗ್ರಾಹಕರಿಗೆ ಮಾತ್ರ ಬಿಲ್ ನೀಡಲಾಗುತ್ತಿದ್ದು, 200 ಯೂನಿಟ್ ಒಳಗಿನ ಬಳಕೆದಾರರಿಗೆ ಜೀರೋ ಬಿಲ್ ದೊರೆಯುತ್ತಿದೆ ಎಂದು ತಿಳಿಸಿದರು.
ನೆರೆ ಸಂದರ್ಭದಲ್ಲಿ ಮನೆಗಳನ್ನು ಕಳೆದುಕೊಂಡಿದ್ದ ಜನರಿಗೆ ಸರ್ಕಾರದಿಂದ ನೆರೆ ಪರಿಹಾರ ದೊರೆತಿದ್ದು, ಇನ್ನೂ ಕೂಡ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳದೆ ಇರುವ ಕೆಲವರಿಗೆ ಮಂಜೂರಾಗಿರುವ ಮನೆಗಳನ್ನು ಬ್ಲಾಕ್ ಮಾಡಬೇಕು. ಸಂಬAಧಿತ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ತಹಸೀಲ್ದಾರ್‌ಗಳು ಕ್ರಮಕೈಗೊಳ್ಳಬೇಕು. ಮನೆ ನಿರ್ಮಾಣ ಮಾಡಿಕೊಳ್ಳದೆ ಇರುವ ಫಲಾನುಭವಿಗಳನ್ನು ಎರಡು ತಿಂಗಳಿನ ಅವಧಿಯೊಳಗೆ ನಿರ್ಮಾಣ ಮಾಡುವಂತೆ ಸೂಚಿಸಬೇಕು. ಇಲ್ಲವಾದಲ್ಲಿ ಸರ್ಕಾರದಿಂದ ಮಂಜೂರಾಗಿರುವ ಹಣವನ್ನು ಹಿಂಪಡೆಯಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಶಾಲೆಗಳ ದುರಸ್ಥಿ ಕಾರ್ಯಕ್ಕೆ ಈಗಾಗಲೇ ಹಂಚಿಕೆಯಾಗಿರುವ ಹಣವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಂಡು ಜಿಲ್ಲೆಯಲ್ಲಿರುವ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ದುರಸ್ಥಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯು ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಸಂಬoಧಪಟ್ಟoತೆ ಹೆಚ್ಚಿನ ರೀತಿಯ ಕಾರ್ಯಕ್ರಮಗಳನ್ನು ಕೈಗೊಂಡು ಉತ್ತಮ ಫಲಿತಾಂಶವನ್ನು ನೀಡಬೇಕು. ಈ ಹಿಂದೆ ಸಭೆಯಲ್ಲಿ ನಿರ್ಧರಿಸಿದಂತೆ ಮೂರು ವಿಭಾಗಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳ ಬೆಳವಣಿಗೆಯ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಬೇಕು. ಆದಷ್ಟು ಜಿಲ್ಲೆಯಲ್ಲಿ ನೂರರಷ್ಟು ಫಲಿತಾಂಶವನ್ನು ನೀಡುವ ನಿಟ್ಟಿನಲ್ಲಿ ಕಾರ್ಯವನ್ನು ನಿರ್ವಹಿಸಬೇಕು. ಶಿಕ್ಷಕರ ನೇಮಕಾತಿಗೆ ಸಂಬoಧಿಸಿದoತೆ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಹೊರ ಜಿಲ್ಲೆಯ ದಾಖಲೆಗಳ ಕೊರತೆಯಿಂದಾಗಿ ಕೆಲ ಅಭ್ಯರ್ಥಿಗಳ ನೇಮಕಾತಿಯು ತಡವಾಗುತ್ತಿದೆ ಇದಕ್ಕೆ ಸಂಬoಧಿಸಿದoತೆ ಅಲ್ಲಿನ ಜಿಲ್ಲಾಧಿಕಾರಿಗಳ ಜೊತೆ ಸಭೆಯನ್ನು ನಡೆಸಿ ಆದಷ್ಟು ಬೇಗ ಸಿಂಧುತ್ವ ಪ್ರಮಾಣ ಪತ್ರವನ್ನು ನೀಡುವಂತೆ ತಿಳಿಸಲಾಗುವುದು ಎಂದರು.
ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗುತ್ತಿರುವ ಹಾಸ್ಟೆಲ್‌ಗಳ ಕಾರ್ಯವು ಸಂಪೂರ್ಣಗೊಳ್ಳುತ್ತಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಮೈಸೂರು ಜಿಲ್ಲೆಯಲ್ಲಿ ಇರುವುದರಿಂದ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಹೆಬ್ಬಾಳ್ ನಲ್ಲಿ ವಿದ್ಯಾರ್ಥಿನಿಲಯದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇನ್ನೂ ಎರಡು ವಿದ್ಯಾರ್ಥಿನಿಲಯಗಳ ಕಾಮಗಾರಿ ಪ್ರಾರಂಭವಾಗಬೇಕಿದೆ. ಮುರಾರ್ಜಿ ದೇಸಾಯಿ ಶಾಲಾ ಕಟ್ಟಡಗಳ ನಿರ್ಮಾಣವು ನಡೆಯುತ್ತಿದ್ದು, ಬೇಕಿರುವ ಮೂಲಸೌಕರ್ಯಗಳನ್ನು ಇಲಾಖೆಗಳಿಂದ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ವಿದ್ಯಾರ್ಥಿನಿಲಯದ ಕೊರತೆಯಿದ್ದು, ಹೊಸ ಕಟ್ಟಡಗಳು ನಿರ್ಮಾಣವಾಗುವವರೆಗೆ ಬಾಡಿಗೆ ಕಟ್ಟಡಗಳನ್ನು ಪಡೆದು ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಸಮಸ್ಯೆ ಆಗದಂತೆ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಬುಡಕಟ್ಟು ಜನರಿಗೆ ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಜಾಬ್ ಕಾರ್ಡ್ ವಿತರಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಿ. ಗ್ರಾಮ ಒನ್ ಕೇಂದ್ರದ ಸೌಲಭ್ಯಗಳು ಹಾಗೂ ಬ್ಯಾಂಕ್ ಅಕೌಂಟ್ ತೆರೆಯುವಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ. ದೀಪಾವಳಿ ಹತ್ತಿರ ಬರುತ್ತಿದ್ದು ಯಾವುದೇ ರೀತಿಯ ಬೆಂಕಿ ಹಾಗೂ ವಿದ್ಯುತ್ ಅವಗಡಗಳು ಸಂಭವಿಸದoತೆ ಎಚ್ಚರಿಕೆ ವಹಿಸಿ. ಪಟಾಕಿ ಮಾರುವವರನ್ನು ಗುರುತಿಸಿ ಸಭೆ ನಡೆಸಿ ಹಸಿರು ಪಟಾಕಿಗಳನ್ನು ಬಳಸುವಂತೆ ಸೂಚಿಸಿ. ಹಳೆ ಜಿಲ್ಲಾಧಿಕಾರಿಗಳ ಕಟ್ಟಡವನ್ನು ಸೇರಿದಂತೆ, ಸರ್ಕಾರಿ ಇಲಾಖೆಯ ಕಟ್ಟಡಗಳು ಸ್ವಚ್ಛ ಹಾಗೂ ವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ದಿನೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಆಶಾದ್ ಉರ್ ರೆಹಮಾನ್ ಶರೀಫ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.