ಅಪಘಾತ ಪರಿಹಾರಕ್ಕೆ ಅರ್ಜಿ ಆಹ್ವಾನ

ಮೈಸೂರು: ಕಾರ್ಮಿಕ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯನ್ನು ನಿರ್ವಾಹಕರು ಮತ್ತು ಕ್ಲೀನರ್‌ಗಳಿಗೂ ಅನ್ವಯಿಸುವಂತೆ ಜಾರಿಗೊಳಿಸಲಾಗಿದ್ದು, ಮೈಸೂರು ಜಿಲ್ಲೆಯ ಖಾಸಗಿ ಸಾರಿಗೆ ವಾಹನಗಳ ನಿರ್ವಾಹಕರು, ಕ್ಲೀನರ್ ಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

2018-19 ನೇ ಸಾಲಿನಿಂದ ಅಪಘಾತದ ಕಾರಣ ನಿಧನರಾದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಂಗದವರೆಗೆ ವಾರ್ಷಿಕ 10,000/- ರೂ.ಗಳ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದ್ದು, ಶೈಕ್ಷಣಿಕ ಧನ ಸಹಾಯಕ್ಕಾಗಿ ನಿಗದಿತ ನಮೂನೆಯಲ್ಲಿ ಮೃತರಾದ/ಸಂಪೂರ್ಣ ಅಂಗ ದುರ್ಬಲತೆ ಉಂಟಾದ ಚಾಲಕರ ಇಬ್ಬರು ಮಕ್ಕಳು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಂಡಳಿಗೆ ಸಲ್ಲಿಸಬಹುದು.

ಅಪಘಾತಕ್ಕೊಳಗಾಗಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಠ 50 ಸಾವಿರ, 15 ದಿನಗಳಿಗಿಂತ ಹೆಚ್ಚು ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಠ 1 ಲಕ್ಷದವರೆಗೆ ಚಿಕಿತ್ಸಾ ವೆಚ್ಚ ಮರುಪಾವತಿ ಪಡೆಯಬಹುದಾಗಿದೆ.

 ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ಮರಣ ಹೊಂದಿದ್ದಲ್ಲಿ, ಅವರ ನಾಮ ನಿರ್ದೇಶಿತರಿಗೆ ರೂ 5 ಲಕ್ಷ ಪರಿಹಾರ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ರೂ 2 ಲಕ್ಷದವರಗೆ ಪರಿಹಾರ ನೀಡಲಾಗುವುದು.

ನೋಂದಾಯಿಸಲು ಇತ್ತೀಚಿನ ಎರಡು ಭಾವಚಿತ್ರ, ವಿಳಾಸದ ಪುರಾವೆ (ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ) ವಯಸ್ಸಿನ ಧೃಡೀಕರಣ ಪತ್ರ (ಆಧಾರ್ ಕಾರ್ಡ್/ಎಸ್.ಎಸ್.ಎಲ್.ಸಿ ಅಂಕಪಟ್ಟಿ/ಪಾನ್ ಕಾರ್ಡ್/ನೋಂದಾಯಿತ ವೈದ್ಯರಿಂದ ವಯಸ್ಸಿನ ಧೃಡೀಕರಣ ಪ್ರಮಾಣ ಪತ್ರ/ ಶಾಲಾ ದಾಖಲೆ/ ಡಿ. ಎಲ್/ ಪಾಸ್ ಪೋರ್ಟ್) ಬ್ಯಾಂಕ್ ಖಾತೆ ಪ್ರತಿ ನಿಗದಿಪಡಿಸಿದ ಉದ್ಯೋಗ ಪ್ರಮಾಣ ಪತ್ರ ಕರ್ತವ್ಯ ನಿರ್ವಹಿಸುತ್ತಿರುವ ಸಂಸ್ಥೆ/ಮಾಲೀಕರಿAದ ಗುರುತಿನ ಚೀಟಿ (ಲಭ್ಯವಿದ್ದಲ್ಲಿ). ನಿರ್ವಾಹಕರಿಗೆ ಊರ್ಜಿತ ಪರವಾನಗಿ ಸಾರಿಗೆ ಇಲಾಖೆಯಿಂದ ಪಡೆದಿರಬೇಕು (ನಿರ್ವಾಹಕರಿಗೆ ಮಾತ್ರ), ಅರ್ಜಿದಾರರು ಕರ್ನಾಟಕ ರಾಜ್ಯ ನಿವಾಸಿಯಾಗಿರಬೇಕು, 20 ರಿಂದ 70 ವರ್ಷದೊಳಗಿರಬೇಕು ಎಂದು ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *