ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 20ರಂದು ಚಾಮರಾಜೇಶ್ವರ ದೇವಸ್ಥಾನದ ಆವರಣದ ಪ್ರಧಾನ ವೇದಿಕೆಯಲ್ಲಿ ಖ್ಯಾತ ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದವರಿಂದ ಸಂಗೀತ ಸಂಜೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.

ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಏರ್ಪಡಿಸಿದ್ದ ಮ್ಯಾರಥಾನ್ ಮುಕ್ತಾಯದ ಕಾರ್ಯಕ್ರಮದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ದಸರಾ ಅಂಗವಾಗಿ ನಾನಾ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಲಾಗಿದೆ. ಅಕ್ಟೋಬರ್ 20ರಂದು ಸಂಜೆ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದ ದಸರಾ ಪ್ರಧಾನ ವೇದಿಕೆಯಲ್ಲಿ ಹಿನ್ನೆಲೆ ಗಾಯಕರಾದ ರಾಜೇಶ್ ಕೃಷ್ಣನ್ ಮತ್ತು ತಂಡದವರು ಸಂಗೀತ ಸಂಜೆ ಪ್ರಸ್ತುತ ಪಡಿಸಲಿದ್ದಾರೆ ಎಂದರು.
ಅಕ್ಟೋಬರ್ 20ರಂದು ಸಂಜೆ 7 ಗಂಟೆಗೆ ದಸರಾ ವೇದಿಕೆಯಲ್ಲಿ ರಾಜೇಶ್ ಕೃಷ್ಣನ್ ಮತ್ತು ತಂಡದವರು ಸಂಗೀತ ಸಂಜೆ ನಡೆಸಿಕೊಡಲಿದ್ದಾರೆ.