ಅ. 26ರಂದು ನಗರದಲ್ಲಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 14 ರಿಂದ 17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮತ್ತು ಪ್ರೌಢಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 26ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸಮಾರಂಭ ಉದ್ಘಾಟಿಸುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸ ಪ್ರಸಾದ್ ಅವರು ಧ್ವಜಾರೋಹಣ ನೆರವೇರಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಕ್ರೀಡಾಜ್ಯೋತಿ ಸ್ವೀಕರಿಸುವರು. ಶಾಸಕರಾದ ಹೆಚ್.ಎಂ. ಗಣೇಶ್‍ಪ್ರಸಾದ್ ಅವರು ತಂಡದ ಪರಿಚಯ ಮಾಡಿಕೊಡುವರು. ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಕ್ರೀಡಾ ವಂದನೆ ಸ್ವೀಕಾರ ಮಾಡುವರು.

ಶಾಸಕರಾದ ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ. ಮಾದೇಗೌಡ, ನಗರಸಭಾ ಸದಸ್ಯರಾದ ಸಿ.ಜಿ. ಚಂದ್ರಶೇಖರ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *