ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 28ರಂದು ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡುವರು. ಮೆರವಣಿಗೆಯು ಪ್ರವಾಸಿ ಮಂದಿರದಿಂದ ನಗರದ ಪ್ರಮುಖ ಬೀದಿಗಳ ಮೂಲಕ ಪೇಟೆ ಪ್ರೈಮರಿ ಶಾಲಾ ಆವರಣಕ್ಕೆ ತಲುಪಲಿದೆ. ಬೆಳಿಗ್ಗೆ 11.30 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸ ಪ್ರಸಾದ್ ಅವರು ಘನ ಉಪಸ್ಥಿತಿ ವಹಿಸುವರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್‍ಪ್ರಸಾದ್, ಎಂ.ಆರ್. ಮಂಜುನಾಥ್, ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ. ಮಾದೇಗೌಡ, ನಗರಸಭಾ ಸದಸ್ಯರಾದ ಕಲಾವತಿ.ಎಂ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರು ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕರಾದ ಡಾ. ನೀಲಗಿರಿ ತಳವಾರ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.