ಆ. 12ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗಗಳ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಆಗಸ್ಟ್ ೧೨ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ದೊಡ್ಡರಾಯಪೇಟೆ ಮತ್ತು ಚಂದಕವಾಡಿ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಚಾಮರಾಜನಗರ ಟೌನ್-೧, ಕೋಡಿಮೋಳೆ, ರಾಮಸಮುದ್ರ, ಮಾದಾಪುರ, ಕಾಗಲವಾಡಿ, ಸೋಮವಾರಪೇಟೆ ಟೌನ್-೨, ಹರದನಹಳ್ಳಿ, ಬೇಡರಪುರ, ಟಿ.ಕೆ ಮೋಳೆ, ಶಿವಪುರ, ಗೂಳಿಪುರ ಎನ್.ಜೆ.ವೈ ಹಾಗೂ ಹಿರಿಕೆರೆ, ಕಾಳಿಕಾಂಬ ಕಾಲೋನಿ, ಚಂದಕವಾಡಿ, ರೇಚಂಬಳ್ಳಿ, ಮಲ್ಲೇದೇವನಹಳ್ಳಿ, ನವೋದಯ, ಹೊಂಡರಬಾಳು, ಜ್ಯೋತಿಗೌಡನಪುರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ ೧೯೧೨ ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *