ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಚಾಮರಾಜನಗರ ವಿಶ್ವವಿದ್ಯಾನಿಲಯ ಸುವರ್ಣ ಗಂಗೋತ್ರಿ ರಾಜ್ಯಶಾಸ್ತ್ರ ವಿಭಾಗ ಮತ್ತು ಸಾಧನ ಸಂಸ್ಥೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಆಗಸ್ಟ್ ೧೭ರಂದು ಬೆಳಿಗ್ಗೆ ೧೦ ಗಂಟೆಗೆ ಬೇಡರಪುರ ಬಳಿಯ ಚಾಮರಾಜನಗರ ವಿಶ್ವ ವಿದ್ಯಾನಿಲಯದ ಸುವರ್ಣ ಗಂಗೋತ್ರಿಯ ನಿಜಗುಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಚಾಮರಾಜನಗರ ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ.ಆರ್. ಗಂಗಾಧರ್ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಉಪಾಧ್ಯಕ್ಷರಾದ ಎಸ್. ಮಂಜು ಹರವೆ, ಚಾಮರಾಜನಗರ ವಿಶ್ವವಿದ್ಯಾನಿಲಯದ ಪರಿಕ್ಷಾಂಗ ವಿಭಾಗದ ಕುಲಸಚಿವರಾದ ಪ್ರೊ. ಪಿ. ಮಾದೇಶ್, ಸಾಧನ ಸಂಸ್ಥೆಯ ನಿರ್ದೇಶಕರಾದ ಟಿ.ಜೆ. ಸುರೇಶ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ. ವಿರೂಪಾಕ್ಷಸ್ವಾಮಿ, ಚಾಮರಾಜನಗರ ವಿಶ್ವವಿದ್ಯಾನಿಲಯ ಪಿ.ಎಂ.ಇ.ಬಿ. ನಿರ್ದೇಶಕರಾದ ವಿ.ಜಿ. ಸಿದ್ದರಾಜು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.