ಆ. 6ರಂದು ಸಂತೇಮರಹಳ್ಳಿ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ೨ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಆಗಸ್ಟ್ ೬ ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ಸಂತೇಮರಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹೊನ್ನೂರು, ಕುದೇರು, ಉಮ್ಮತ್ತೂರು, ಸಂತೇಮರಹಳ್ಳಿ, ಕೆಂಪನಪುರ, ನವಿಲೂರು, ದುಗ್ಗಟ್ಟಿ, ಆಲ್ದೂರು, ಅಂಬಳೆ, ಮಂಗಲ ವಾಟರ್‌ಸಪ್ಲೈ, ಚುಂಗಡಿಪುರ, ಅವಿತ್ ಗ್ರೀನ್ ಸೋಲಾರ್, ಮೂಡಲ ಅಗ್ರಹಾರ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ ೧೯೧೨ ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *