ಚಾಮರಾಜನಗರ: ರಾಜ್ಯ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಟಿಶ್ಯೂ ಪೇಪರ್ ಹಿಡಿದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಟಿಸ್ಯೂ ಪೇಪರ್ ಹಿಡಿದು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಅಲ್ಲಿ ಹಾದಿಹೋಗಿರುವ ರಾಷ್ಟಿçÃಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರನ್ನು ಬಿಟ್ಟಿರುವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ಒಂದು ತಿಂಗಳಿನಿAದ ನಿರಂತರ ಹೋರಾಟ ನಡೆಸುತ್ತಿದ್ದು ಇಂದು ಕೂಡ ಕರ್ನಾಟಕ ಜನತೆಗೆ ನೀರು ಇಲ್ಲದೆ ಟಿಶ್ಯೂ ಪೇಪರ್‌ನಲ್ಲಿ ಒರೆಸುವ ಪರಿಸ್ಥಿತಿ ಕರ್ನಾಟಕಕ್ಕೆ ಬರುತ್ತಿದೆ. ಕಾವೇರಿ ನೀರನ್ನೆಲ್ಲ ತಮಿಳುನಾಡಿಗೆ ಬಿಟ್ಟು ಮುಂದಿನ ದಿನಗಳಲ್ಲಿ ಜನತೆ ಮುಖ, ಕೈಕಾಲು ತೊಳೆಯಲಿಕ್ಕೆ, ಸ್ನಾನ ಮಾಡುವುದಕ್ಕೆ ಟಿಶ್ಯೂಪೇಪರ್‌ನಲ್ಲಿ ಒರೆಸಿಕೊಳ್ಳಬೇಕಾಗುತ್ತದೆ ಅಂತಾ ಹೇಳಿ ಒಂದು ಅಣಕು ಪ್ರತಿಭಟನೆ ಮಾಡಿ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತಿದೆ ಎಂದರು.
ತಮಿಳುನಾಡಿ ಶಾಸನಸಭೆಯಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಸರ್ಕಾರ ನಿರ್ಣಯಕೈಗೊಂಡು ಕರ್ನಾಟಕ ಸರ್ಕಾರ ಕಾವೇರಿಯಲ್ಲಿ ನೀರಿಲ್ಲ ಎಂದು ಸುಳ್ಳು ಹೇಳುತ್ತಿದೆ ಸಂಪೂರ್ಣ ನೀರು ಬಿಡುವಂತೆ ಒತ್ತಾಯ ಮಾಡಿರುವುದು ನಿಜಕ್ಕೂ ಅತ್ಯಂತ ಖಂಡನೀಯ. ಮುಂದಿನ ದಿನಗಳಲ್ಲಿ ತಮಿಳುನಾಡು, ಮುಖ್ಯಮಂತ್ರಿ ಸ್ಟಾಲಿನ್ ವಿರುದ್ದ ದೊಡ್ಡ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್‌ಗೋಪಾಲ್, ನಿಜಧ್ವನಿಗೋವಿಂದರಾಜು, ಮಹೇಶ್‌ಗೌಡ, ಚಾ.ಹ.ರಾಮು, ಡ್ಯಾನ್ಸ್ ಬಸವರಾಜು, ನಂಜುAಡಸ್ವಾಮಿ, ಸೋಮವಾರಪೇಟೆ ಮಂಜು, ವರದನಾಯಕ, ವೀರಭದ್ರ, ರವಿಚಂದ್ರಪ್ರಸಾದ್ ಕಹಳೆ, ಗು.ಪುರುಷೋತ್ತಮ್, ತಾಂಡವಮೂರ್ತಿ ಇತರರು ಭಾಗವಹಿಸಿದ್ದರು.