ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 53 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ಗಿಲ್ಕಿ ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಿಲ್ಕಿ ಹಿಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 53 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ಗಿಲ್ಕಿ ಆಟ ಆಡುತ್ತಿವೆ ಎಂದು ಆರೋಪಿಸಿ ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದರು.
ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, , ಮಹೇಶ್ , ನಂಜುಂಡಸ್ವಾಮಿ, ಲಿಂಗರಾಜು, ಮಹೇಶ್ ಗೌಡ, ಗು.ಪುರುಷೋತ್ತಮ್, ವೀರಭದ್ರ, ತಾಂಡವಮೂರ್ತಿ, ರಾಜಪ್ಪ, ಮೂಡ್ಲುಪುರಪ್ರಕಾಶ್, ಲಿಂಗರಾಜು ಇತರರು ಹಾಜರಿದ್ದರು.