ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 54 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ಚಾವಟಿಯಿಂದ ಹೊಡೆದುಕೊಳ್ಳುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾವಟಿಯಿಂದ ಹೊಡೆದುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 53ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದುಇಂದು ಕೂಡ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಸರ್ಕಾರಗಳು, ಕಾವೇರಿ ನಿರ್ವಹಣಾ ಮಂಡಳಿಯು ತಮಿಳುನಾಡಿನ ಪರವಾಗಿದ್ದು, ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡಿದ್ದು, ತಮ್ಮನ್ನು ಚಾವಟಿಯಿಂದ ಹೊಡೆದುಕೊಳ್ಳುವಂತೆ ಮಾಡಿದೆ ಎ ಎಂದು ಆರೋಪಿಸಿ ನಾವೆಲ್ಲರೂ ಚಾವಟಿಯಿಂದ ಹೊಡೆದುಕೊಳ್ಳುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದರು.
ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ದರು.
ಪ್ರತಿಭಟನೆಯಲ್ಲಿ ನಿಜದ್ವನಿಗೋವಿಂದರಾಜು, ಗು.ಪುರುಷೋತ್ತಮ ನಂಜುಂಡಸ್ವಾಮಿ, ಚಾ.ಹ.ರಾಮು, ರಾಮಸಮುದ್ರ ಸುರೇಶ್, ತಾಂಡವಮೂರ್ತಿ, ವೀರಭದ್ರ, ಇತರರು ಭಾಗವಹಿಸಿದ್ದರು.