ಕೃಷಿ ಪಂಡಿತ, ಅತ್ಯುತ್ತಮ ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ೨೦೨೩-೨೪ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಮತ್ತು ಆತ್ಮ ಯೋಜನೆಯಡಿ ತಾಲೂಕು ಮತ್ತು ಜಿಲ್ಲಾಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ದಿಗೆ ಅಪಾರಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಚಾಮರಾಜನಗರ ತಾಲೂಕಿನ ರೈತರು, ರೈತ ಮಹಿಳೆಯರು ಕೃಷಿ ಪಂಡಿತ ಪ್ರಶಸ್ತಿ ಮತ್ತು ಆತ್ಮ ಯೋಜನೆಯ ರೈತ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದು.

ಚಾಮರಾಜನಗರ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಜುಲೈ ೨೫ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಗಳು, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕರಾದ ಕೆ.ಬಿ. ಸಂದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *