ಚಾಮರಾಜನಗರ: ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಡೇ-ನಲ್ಮ್ ಯೋಜನೆಯ ಸ್ವಯಂ ಉದ್ಯೋಗ ಎಸ್.ಇ.ಪಿ ಉಪಘಟಕದಡಿ ಸ್ವಂತ ಉದ್ದಿಮೆ ಪ್ರಾರಂಭಿಸುವವರಿಗೆ ಶೇ. 7ಕ್ಕಿಂತ ಹೆಚ್ಚಿನ ಬಡ್ಡಿ ಸಹಾಯಧನದೊಂದಿಗೆ ಬ್ಯಾಂಕಿನ ಮೂಲಕ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕೊಳ್ಳೇಗಾಲ ನಗರಸಭೆ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಎರಡು ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕ ಮತ್ತು 2 ಲಕ್ಷ ರೂ. ಗಳ ಯೋಜನಾ ವರದಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ನವೆಂಬರ್ 18 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಡೇ-ನಲ್ಮ್ ಶಾಖೆಯ ಮೊ.ಸಂ 9980537570, 8073859644, 8095046350 ಸಂಪರ್ಕಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಡ್ಲುಪೇಟೆ : ಗುಂಡ್ಲುಪೇಟೆ ಪುರಸಭೆ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಡೇ-ನಲ್ಮ್ ಯೋಜನೆ ಎಸ್.ಇ.ಪಿ ಉಪಘಟಕದಡಿ ಸ್ವಂತ ಉದ್ದಿಮೆ ಪ್ರಾರಂಭಿಸುವವರಿಗೆ ಶೇ. 7ಕ್ಕಿಂತ ಹೆಚ್ಚಿನ ಬಡ್ಡಿ ಸಹಾಯಧನದೊಂದಿಗೆ ಬ್ಯಾಂಕಿನ ಮೂಲಕ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಗುಂಡ್ಲುಪೇಟೆ ಪುರಸಭಾ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಎರಡು ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕ ಮತ್ತು 2 ಲಕ್ಷ ರೂ. ಗಳ ಯೋಜನಾ ವರದಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ನವೆಂಬರ್ 20ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪುರಸಭೆಯ ಕಲ್ಯಾಣ ಶಾಖೆಯ ಮೊ.ಸಂ 7204442550 ಸಂಪರ್ಕಿಸುವಂತೆ ಪುರಸಭಾ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು : ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2023-24ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಡೇ-ನಲ್ಮ್ ಯೋಜನೆ ಎಸ್.ಇ.ಪಿ ಉಪಘಟಕದಡಿ ಸ್ವಂತ ಉದ್ದಿಮೆ ಪ್ರಾರಂಭಿಸುವವರಿಗೆ ಶೇ. 7ಕ್ಕಿಂತ ಹೆಚ್ಚಿನ ಬಡ್ಡಿ ಸಹಾಯಧನದೊಂದಿಗೆ ಬ್ಯಾಂಕಿನ ಮೂಲಕ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಎರಡು ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕ ಮತ್ತು 2 ಲಕ್ಷ ರೂ.ಗಳ ಯೋಜನಾ ವರದಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 24 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯಿತಿಯ ಡೇ-ನಲ್ಮ್ ಶಾಖೆಯ ಮೊ.ಸಂ 9845933949, 9945709840 ಸಂಪರ್ಕಿಸುವಂತೆ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.