ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾ? ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ೨೦೨೩-೨೪ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಅರ್ಹ ಕ್ರೀಡಾಪಟುಗಳು ನಿಗದಿತ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ ೨೦ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ ೦೮೨೨೬-೨೨೪೯೩೨, ಮೊ.ಸಂ ೯೮೪೪೧೬೦೮೪೧ ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *