ಚಾಮರಾಜನಗರ ಜಿಲ್ಲೆಯ 5 ಗ್ರಾ.ಪಂ ಸದಸ್ಯ ಸ್ಥಾನಗಳ ಉಪ ಚುನಾವಣೆ ಮುಂದೂಡಿಕೆ

ಚಾಮರಾಜನಗರ: ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಚಾಮರಾಜನಗರ ಜಿಲ್ಲೆಯ 5 ಗ್ರಾಮ ಪಂಚಾಯಿತಿಗಳ 5 ಸದಸ್ಯ ಸ್ಥಾನಗಳಿಗೆ ನಡೆಯಬೇಕಿದ್ದ ಉಪ ಚುನಾವಣೆಯನ್ನು 15 ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಕೆಂಪನಪುರ ಗ್ರಾಮ ಪಂಚಾಯಿತಿಯ ಸಿಂಗನಪುರ ಕ್ಷೇತ್ರ, ಗುಂಡ್ಲುಪೇಟೆ ತಾಲ್ಲೂಕಿನ ಸೋಮಹಳ್ಳಿ ಗ್ರಾಮ ಪಂಚಾಯಿತಿಯ ಕೊಡಗಾಪುರ ಕ್ಷೇತ್ರ, ಯಳಂದೂರು ತಾಲ್ಲೂಕಿನ ಗೌಡಹಳ್ಳಿ ಗ್ರಾಮ ಪಂಚಾಯಿತಿಯ ಟಿ. ಹೊಸೂರು ಕ್ಷೇತ್ರ ಹಾಗೂ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿಯ ಅತ್ತಿಖಾನೆ ಕ್ಷೇತ್ರ ಮತ್ತು ಮಲೈ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯ ಗೊರಸಾಣೆ ಕ್ಷೇತ್ರಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನಡೆಸಬೇಕಾಗಿದ್ದ ಉಪ ಚುನಾವಣೆಯನ್ನು 15 ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *