ಚಾಮರಾಜನಗರ ದಸರಾ ಮಹೋತ್ಸವಕ್ಕೆ ಅ.17ರಂದು ಚಾಲನೆ, ಕಾರ್ಯಕ್ರಮಗಳ ವಿವರ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಅಕ್ಟೋಬರ್ 17 ರಿಂದ 20ರವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ದ ಅಂಗವಾಗಿ ಅ. 17ರಂದು ದಸರಾ ಕಾರ್ಯಕ್ರಮಗಳು ಉದ್ಘಾಟನೆ ನೆರವೇರಲಿದೆ.


ಅ. ಕ್ಟೋಬರ್ 17ರಂದು ಬೆಳಿಗ್ಗೆ 10.15 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಸಾಂಪ್ರಾದಾಯಿಕ ಪೂಜಾ ಕೈಂಕರ್ಯದೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ದಸರಾ ಕವಿಗೋಷ್ಠಿ ನಡೆಯಲಿದೆ. 11.15 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲೆಯ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ. 11.30 ಗಂಟೆಗೆ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಚಿತ್ರಕಲಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಶ್ರೀ ಚಾಮುಂಡೇಶ್ವರಿ ವಿಗ್ರಹದೊಂದಿಗೆ ದಸರಾ ಮೆರವಣಿಗೆಗೆ ಜಿಲ್ಲೆಯ ವಿವಿಧ ಕಲಾತಂಡಗಳು, ವಿವಿಧ ಇಲಾಖೆಗಳ ಸ್ಥಬ್ದಚಿತ್ರಗಳ (ಟ್ಯಾಬ್ಲೋ) ಮೆರವಣಿಗೆಗೆ ಚಾಲನೆ ನೀಡಲಾಗುವುದು. ಸಂಜೆ 5.30 ಗಂಟೆಗೆ ಚಾಮರಾಜೇಶ್ವಸ್ವಾಮಿ ದೇವಾಲಯ ಮುಂಭಾಗದ ಪ್ರಧಾನ ವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು
ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸ ಪ್ರಸಾದ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್‍ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಮರಿತಿಬ್ಬೇಗೌಡ, ಮಧು. ಜಿ. ಮಾದೇಗೌಡ, ಸಿ.ಎನ್. ಮಂಜೇಗೌಡ, ನಗರಸಭಾ ಸದಸ್ಯರಾದ ಅಬ್ರಾರ್ ಅಹಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಅ. 18ರಂದು ಬೆಳಿಗ್ಗೆ 6.30 ಗಂಟೆಗೆ ಚಾಮರಾಜೇಶ್ವರಸ್ವಾಮಿ ದೇವಾಲಯ ಅವರಣದಲ್ಲಿ ದಸರಾ ಮ್ಯಾರಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ. 10.30 ಗಂಟೆಗೆ ಮಹಿಳಾ ದಸರಾ ಕಾರ್ಯಕ್ರಮ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ನಡೆಯಲಿದೆ. 11ರಿಂದ 6 ಗಂಟೆಯವರೆಗೆ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಾಟಕೋತ್ಸವ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9.45ರವರೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಖ್ಯ ವೇದಿಕೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.
ಅ. 19ರಂದು ಬೆಳಿಗ್ಗೆ 10 ಗಂಟೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರೈತ ದಸರಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. 11 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರೈತ ದಸರಾ ವೇದಿಕೆ ಕಾರ್ಯಕ್ರಮ ನಡೆಯಲಿದೆ. 11ರಿಂದ 6 ಗಂಟೆಯವರೆಗೆ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9.45ರವರೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ವೇದಿಕೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.
ಅ. 20ರಂದು ಬೆಳಿಗ್ಗೆ 11ರಿಂದ 6 ಗಂಟೆಯವರೆಗೆ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9.45ರವರೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಖ್ಯ ವೇದಿಕೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 7ಗಂಟೆಗೆ ದಸರಾ ಮಹೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *