
ಚಾಮರಾಜನಗರ: ಜುಲೈ ೩ರಂದು ನಡೆಯಲಿರುವ ಶ್ರೀ ಚಾಮರಾಜೇಶ್ವರ ಬ್ರಹ್ಮ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಶುಕ್ರವಾರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಶ್ರೀ ಚಾಮರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಈ ಸಂದರ್ಭ ಶ್ರೀ ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜಾತ್ರಾ ಮಹೋತ್ಸವ ಸಿದ್ಧತೆಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನ ಅರ್ಚಕರಾದ ರಾಮಕೃಷ್ಣ ಭಾರಧ್ವಾಜ್, ದೇವಸ್ಥಾನ ಬಂಡಿಗಾರ್ ದೆಫೇದಾರ್ ಮಹೇಶ್, ನಗರಸಭೆ ಮಾಜಿ ಸದಸ್ಯ ಪುಟ್ಟಸ್ವಾಮಿ, ಸುರೇಶ್, ಕಾಗಲವಾಡಿ ಮೋಳೆ ಶ್ರೀನಿವಾಸ್ ಸೇರಿದಂತೆ ಇತರರಿದ್ದರು.

