ಜಿಲ್ಲಾಧಿಕಾರಿಯವರಿಂದ ಪಿ.ಎಂ. ಸ್ವ ನಿಧಿ, ಸಮೃದ್ದಿ ಯೋಜನೆಗಳ ಪ್ರಗತಿ ಪರಿಶೀಲನೆ

ಚಾಮರಾಜನಗರ: ಪಿ.ಎಂ. ಸ್ವ-ನಿಧಿ ಮತ್ತು ಸ್ವ-ನಿಧಿಸೇ ಸಮೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ (ಅ.5) ನಡೆಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಯವರು ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣ ಪತ್ರಗಳನ್ನು ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳಿಗೆ ವಿತರಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಮಾರುಕಟ್ಟೆ ವಲಯಗಳನ್ನು ಪ್ರಾರಂಭಿಸಲು ಸ್ಥಳಗಳನ್ನು ಗುರುತಿಸಿ, ಈಗಾಗಲೇ ಅನುಮೋದನೆಯಾಗಿರುವ ಅನುದಾನವನ್ನು ಬಳಸಿಕೊಂಡು ಸುಸಜ್ಜಿತವಾದ ವಲಯಗಳನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿಯವರು ತಿಳಿಸಿದರು.

ಪಿ.ಎಂ. ಸ್ವ-ನಿಧಿ ಯೋಜನೆಯಡಿ 1ನೇ, 2ನೇ ಮತ್ತು 3ನೇ ಹಂತದಲ್ಲಿ ಬ್ಯಾಂಕುಗಳಲ್ಲಿ ಬಾಕಿ ಇರುವ ಅರ್ಜಿಗಳನ್ನು ಒಂದು ವಾರದೊಳಗೆ ಪೂರ್ಣಗೊಳಿಸಲು ಸಂಬಂದಿಸಿದ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಡಿಜಿಟಲ್ ಆನ್ ಬೋಡಿರ್‍ಂಗ್ ಮಾಡಲು ಬಾಕಿ ಇರುವ ಬೀದಿ ಬದಿ ವ್ಯಾಪಾರಿಗಳಿಗೆ ಅರಿವು ಮೂಡಿಸುವ ಮೂಲಕ ಎಲ್ಲರಿಗೂ ಕ್ಯೂ ಆರ್ ಕೋಡ್ ಗಳನ್ನು ವಿತರಿಸಲು ಕ್ರಮವಹಿಸುವಂತೆ ತಿಳಿಸಿದರು.

ಸ್ವ-ನಿಧಿಸೇ ಸಮೃದ್ಧಿ ಯೋಜನೆಯಡಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೂ 10 ದಿನಗಳ ಒಳಗಾಗಿ ಪೂರ್ಣಗೊಳಿಸಬೇಕು.
ಪ್ರತಿ ತಿಂಗಳು ಮೊದಲನೇ ವಾರ ಮೇಳಾಗಳನ್ನು ಆಯೋಜಿಸಿ, 8 ಕೇಂದ್ರದ ಯೋಜನೆಗಳಿಗೆ ಜೋಡಣೆ ಮಾಡುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.

ಐ.ಇ.ಸಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಬಿಡುಗಡೆಯಾಗಿರುವ ಅನುದಾನದಲ್ಲಿ ವೋಡಿರ್‍ಂಗ್ಸ್, ಫ್ಲೆಕ್ಸ್, ಕರ ಪತ್ರ ಮುಂತದವುಗಳ ಮೂಲಕ ಹೆಚ್ಚಿನ ಪ್ರಚಾರ ನೀಡಬೇಕು.

ನಗರ ವ್ಯಾಪ್ತಿಯಲ್ಲಿ ವಾರ್ಡ್ ವಾರು ಸಭೆಗಳನ್ನು ಆಯೋಜಿಸಿ ಆಯಾ ವಾರ್ಡಿನ ಜನಪ್ರತಿನಿಧಿಗಳ ಸಹಕಾರದೊಂದಿಗೆ ಕಾರ್ಯಕ್ರಮಗಳನ್ನು ಆಯೋಜಿಸಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸದಸ್ಯರು, ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರು, ಪೌರಾಯುಕ್ತರು, ಮುಖ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *