ಚಾಮರಾಜನಗರ: ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ನಗರದಲ್ಲಿಂದು ಮುಂಜಾನೆಯಿಂದಲೇ ಪ್ರದಕ್ಷಿಣೆ ನಡೆಸಿ ಸ್ವಚ್ಛತೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು.

ನಗರಸಭೆಯ ವಿವಿಧ ವಾರ್ಡುಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೈರ್ಮಲ್ಯ ಇನ್ನಿತರ ಕಾರ್ಯಗಳನ್ನು ವೀಕ್ಷಣೆ ಮಾಡಿದರು. ಪೌರಕಾರ್ಮಿಕರೊಂದಿಗೆ ಮಾತನಾಡಿ ಅವರ ಕುಂದು ಕೊರತೆಗಳನ್ನು ಆಲಿಸಿದರು.

ಪಟ್ಟಣದ ಮಾರುಕಟ್ಟೆಗೆ ಭೇಟಿ ನೀಡಿ ಅಲ್ಲಿನ ವ್ಯಾಪಾರಿಗಳ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸಿದರು. ಸದರಿ ಪ್ರದೇಶದಲ್ಲಿ ಸ್ವಚ್ಛತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿಯವರು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಹಳೆ ಪೆÇಲೀಸ್ ಸ್ಟೇಷನ್ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಹದೇಶ್ವರ ಬಡಾವಣೆಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ, ಬಡಾವಣೆ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಯ ಬಗ್ಗೆ ಚರ್ಚಿಸಿದರು. ಕೂಡಲೆ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ನಿರ್ದೇಶನ ನೀಡಿದರು.
ನಗರಸಭೆ ಆಯುಕ್ತರಾದ ಎಸ್.ವಿ. ರಾಮದಾಸ್, ನಗರಸಭೆಯ ಇತರೆ ಅಧಿಕಾರಿಗಳು ಹಾಜರಿದ್ದರು.