ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕನಕ ಜಯಂತಿ

ಚಾಮರಾಜನಗರ: ದಾಸಶ್ರೇಷ್ಠ ಕನಕದಾಸರ 536 ನೇ ಜಯಂತಿ ಕಾರ್ಯಕ್ರಮವನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.

ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ದಾಸ ಪರಂಪರೆಯಲ್ಲಿ ಕನಕದಾಸರು ಪ್ರಮುಖರಾಗಿದ್ದು, ಸಮಾಜದಲ್ಲಿ ಸಮಾನತೆ ನೆಲೆಸಲು ಶ್ರಮಿಸಿದ ಮಹಾನ್ ಸಂತ, ಕುಲ ಕುಲವೆಂದು ಹೊಡೆದಾಡದಿರಿ ಕುಲದ ನೆಲೆಯನ್ನೇದಾದರೂ ಬಲ್ಲಿರಾ ಎಂದು ಪ್ರಶ್ನಿಸಿ ಜಾತಿಯ ವ್ಯವಸ್ಥೆಯನ್ನು ವಿರೋಧಿಸಿದ್ದರು. ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಯತ್ನಿಸಿದ್ದರು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಸಮಾಜ ಸುಧಾರಣೆಗೆ ದುಡಿದ ಮಹಾನ್ ದಾರ್ಶನಿಕರನ್ನು ಕೇವಲ ಆಚರಣೆಗಳಿಗೆ ಸೀಮಿತವಾಗಿ ಮಾಡಬಾರದು. ಅವರ ವಿಚಾರಧಾರೆಗಳನ್ನು ಅರ್ಥ ಮಾಡಿಕೊಂಡು ಅವರ ಹಾದಿಯಲ್ಲಿ ಸಾಗಬೇಕು. ಅವರ ಜೀವನಚರಿತ್ರೆಯನ್ನು ಅಧ್ಯಯನ ಮಾಡುವ ಕಾರ್ಯ ಪ್ರಸ್ತುತ ಸಂದರ್ಭದಲ್ಲಿ ನಡೆಯಬೇಕಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುವiರ್, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಚಿಕ್ಕಮಹಾದೇವ, ಆರ್.ಮಹದೇವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಮಾಧ್ಯಮ ಕಾರ್ಯದರ್ಶಿ ವಕೀಲ ಅರುಣ್ ಕುಮಾರ್, ನಗರಸಭಾ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಚಿನ್ನಮ್ಮ, ಮಾಜಿ ಜಿ,ಪಂ ಸದಸ್ಯರಾದ ಕೆರಹಳ್ಳಿ ನವಿನ್, ಸೋಮನಾಯಕ, ಸಿ.ಕೆ ರವಿಕುಮಾರ್ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಸ್ವಾಮಿ, ಸೈಯದ್‍ರಫಿ, ಕಾಗಲವಾಡಿ ಶಿವಸ್ವಾಮಿ, ಚಂದ್ರು, ಪೃಥ್ವಿ, ರಾಜು, ಮರಿಯಾಲದಹುಂಡಿ ಕುಮಾರ್, ಸೇವಾದಳದ ಜಯರಾಜು, ಶೇಷಣ್ಣ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಸೋಮಣ್ಣ, ನಾಗಯ್ಯ, ನಸ್ರುಲ್ಲಾಖಾನ್, ಆಯಿಭ್ ಖಾನ್ ,ನಾಯಜ್, ಅಷ್ಸರ್ ಅಹಮದ್, ಅಬ್ಬಾಸ್, ಇಂಬ್ರಾನ್‍ಅಹಮದ್, ಚಂಗುಮಣಿ, ನಾಗೇಂದ್ರ ಶಿವಮೂರ್ತಿ, ಜಗದೀಶ್ ಹೋಸೂರು, ಮೋಹನ್, ಅಕ್ಷಯ್,ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖೆಯಲ್ಲಿದ್ದರು.

Leave a Reply

Your email address will not be published. Required fields are marked *