ಜಿಲ್ಲಾ ನೆಟ್‍ಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷೆ, ಅಧ್ಯಕ್ಷರಿಗೆ ಎಂಬಿಬಿಎಸ್ ವಿದ್ಯಾರ್ಥಿಗಳಿಂದ ಸನ್ಮಾನ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ನೆಟ್‍ಬಾಲ್ ಅಸೋಸಿಯೇಷನ್‍ನ ಗೌರವಾಧ್ಯಕ್ಷರು ಹಾಗೂ ಅಧ್ಯಕ್ಷರನ್ನು ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಅಭಿನಂದಿಸಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾ ನೆಟ್‍ಬಾಲ್ ಅಸೋಸಿಯೇಷನ್‍ನ ಗೌರವಾಧ್ಯಕ್ಷೆ ನರ್ಗೀಸ್‍ಬಾನು ಹಾಗೂ ಅಧ್ಯಕ್ಷರಾದ ವಿ.ಶ್ರೀನಿವಾಸಪ್ರಸಾದ್ ಅವರಿಗೆ ಹಾರ, ಶಾಲು ಹಾಕಿ ಅತ್ಮೀಯವಾಗಿ ಅಭಿನಂದಿಸಲಾಯಿತು.

ಗೌರವಾಧ್ಯಕ್ಷೆ ನರ್ಗೀಸ್‍ಬಾನು ಅವರು ಸನ್ಮಾನ ಸ್ವೀಕರಿಸಿ ನಂತರ ಮಾತನಾಡಿ, ಇತ್ತೀಚಿನ ಯುವ ಪೀಳಿಗೆ ಕ್ರೀಡೆಯಲ್ಲಿ ಆಸಕ್ತಿ ತೋರಿಸುತ್ತಿರುವುದು ಸಂತಸದ ವಿಷಯ. ಇನ್ನೂ ಹೆಚ್ಚೆಚ್ಚು ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ಜಿಲ್ಲೆಗೆ ರಾಜ್ಯಕ್ಕೆ ಕೀರ್ತಿ ತರುವಂತಹ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢಗೊಳ್ಳಲು ಸಾಧ್ಯ ಎಂದರು.

ಅಧ್ಯಕ್ಷರಾದ ವಿ.ಶ್ರೀನಿವಾಸ ಪ್ರಸಾದ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದ ಜೊತೆಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಹ ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ತೋರಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದ ಅವರು, ಕ್ರೀಡೆಯಲ್ಲಿ ಪಾಲ್ಗೊಳ್ಳುವಂತಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಮತ್ತಷ್ಟು ಹೆಚ್ಚು ಮಾಡಬೇಕು. ಇದರಿಂದ ಅವರು ಹೊರ ಜಿಲ್ಲೆ, ರಾಜ್ಯ, ದೇಶಗಳಲ್ಲಿ ಪಾಲ್ಗೊಳ್ಳುವ ಮೂಲಕ ನಮ್ಮ ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚು ಮಾಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಿಶೇಷ ಆಹ್ವಾನಿತರಾದ ಚಾಮುಲ್‍ನ ಗುಣ, ಭರವಸೆ ವಿಭಾಗದ ತಾಂತ್ರಿಕ ಅಧಿಕಾರಿ ಅಲಿಖಾನ್ ಸಾಹೇಬ್, ನಾಗಲಕ್ಷ್ಮೀ ಶ್ರೀನಿವಾಸಪ್ರಸಾದ್, ಹರ್ಷಿತ್.ಎಸ್, ಹೃತಿಕ್‍ಜೆ.ಗೌಡ, ಸುಹಾಸ್.ಬಿ.ಎಂ., ನೀರಜ್‍ಗೌಡ, ರವಿಶಂಕರ್.ಎಂ., ಸುಹಾಸ್.ಬಿ.ಎಸ್, ಅಚ್ಯುತ್‍ಗೌಡ, ಮಧುಸೂಧನ್, ಯಶವಂತ್, ನಿಶ್ಚಲ್, ಪೃಥ್ವಿರಾಜ್, ಸೃಜನ್, ಮಯೂರ್, ರಾಕೇಶ್, ಸಿದ್ದನಗೌಡ ಪಾಟೀಲ್ ಇನ್ನಿತರರಿದ್ದರು.

Leave a Reply

Your email address will not be published. Required fields are marked *