ಚಾಮರಾಜನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಇನ್ನಿತರ ಗಾಂಧೀಜಿಯವರ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಒಟ್ಟು 9 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಪ್ರತಿ ವಿಭಾಗದಲ್ಲಿ ಅತ್ಯುತ್ತಮವೆನಿಸಿದ 3 ವಿದ್ಯಾರ್ಥಿಗಳ ಪ್ರಬಂಧಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ.
ಪ್ರೌಢಶಾಲಾ ವಿಭಾಗದಲ್ಲಿ ಹನೂರು ತಾಲೂಕಿನ ಗೌತಮ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಹರ್ಷಿತ. ಆರ್. ಪ್ರಥಮ ಸ್ಥಾನ, ಯಳಂದೂರು ತಾಲೂಕು ಕೆಸ್ತೂರಿನ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅರ್ಚನಾ. ಎನ್. ದ್ವಿತೀಯ ಸ್ಥಾನ ಹಾಗೂ ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರದ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಶುಭ .ಎಂ. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ ಗುಂಡ್ಲುಪೇಟೆ ತಾಲೂಕು ಬೇಗೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ (ಪಿ.ಸಿ.ಎಂ.ಬಿ) ವಿದ್ಯಾರ್ಥಿನಿ ಮೌಲ್ಯ ಬಿ.ಸಿ. ಪ್ರಥಮ ಸ್ಥಾನ, ಯಳಂದೂರಿನ ಜೆ.ಎಸ್.ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ (ಕಲಾ ವಿಭಾಗ) ವಿದ್ಯಾರ್ಥಿನಿ ಸುಮಾ ದ್ವಿತೀಯ ಸ್ಥಾನ ಹಾಗೂ ಚಾಮರಾಜನಗರ ತಾಲೂಕಿನ ಅಮಚವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ (ವಾಣಿಜ್ಯ ವಿಭಾಗ) ವಿದ್ಯಾರ್ಥಿನಿ ದೇವಿರಮ್ಮ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪದವಿ ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಚಾಮರಾಜನಗರದ ಜೆ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಥಮ ವರ್ಷದ ಶಿಕ್ಷಣಾರ್ಥಿ ಕೆಂಪರಾಜು ಕೆ.ಜಿ. ಪ್ರಥಮ ಸ್ಥಾನ, ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯ ಶ್ರೀ ಮದ್ದಾನೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಸುಲೋಚನ. ಎಂ. ದ್ವಿತೀಯ ಸ್ಥಾನ ಹಾಗೂ ಚಾಮರಾಜನಗರದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿ ಜ್ಞಾನೇಂದ್ರ ಮೆಘಾವತ್ ತೃತೀಯ ಸ್ಥಾನ ಪಡೆದಿದ್ದಾರೆ.
ಪ್ರಥಮ ಬಹುಮಾನವಾಗಿ 3 ಸಾವಿರ ರೂ., ದ್ವಿತೀಯ ಬಹುಮಾನವಾಗಿ 2 ಸಾವಿರ ರೂ., ತೃತೀಯ ಬಹುಮಾನವಾಗಿ 1 ಸಾವಿರ ರೂ. ನಗದು ಬಹುಮಾನ ನೀಡಲಾಗುತ್ತದೆ. ಸ್ಪರ್ಧೆಯಲ್ಲಿ ವಿಜೇತರಾಗಿರುವ ವಿದ್ಯಾರ್ಥಿಗಳಿಗೆ ಅಕ್ಟೋಬರ್ 2ರಂದು ನಡೆಯಲಿರುವ ಜಿಲ್ಲಾ ಮಟ್ಟದ ಗಾಂಧಿ ಜಯಂತಿ ಸಮಾರಂಭದಲ್ಲಿ ನಗದು ಬಹುಮಾನ ವಿತರಿಸಲಾಗುವುದೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ನಿರ್ದೇಶಕರಾದ ಎ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.