ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಇಂದು ಸಂಜೆ ನೆರವೇರಿತು.

ನಗರದ ಚಾಮರಾಜೇಶ್ವರ ದೇವಾಲಯದ ಆವರಣದ ಪ್ರಧಾನ ವೇದಿಕೆಯಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ,ಎ.ಆರ್.ಕೃಷ್ಣ ಮೂರ್ತಿ ,ಎಚ್.ಎಂ.ಗಣೇಶ್ ಪ್ರಸಾದ್, ಅವರು ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ‌ ನೀಡಿದರು.

ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ 2013 ರಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮೈಸೂರು ದಸರಾವನ್ನು ಚಾಮರಾಜನಗರಕ್ಕೆ ವಿಸ್ತರಿಸಿದರು.2015 ರಲ್ಲಿ ಪ್ರವಾಹದಿಂದ ದಸರಾ ಆಚರಣೆಯಾಗಿರಲಿಲ್ಲ.ಕೋವಿಡ್ ಸಮಯದಲ್ಲಿ ಸರಳವಾಗಿ ದಸರೆ ನಡೆಸಲಾಗಿತ್ತು.ಇನ್ನುಳಿದಂತೆ ಎಲ್ಲ ವರ್ಷಗಳಲ್ಲಿ ದಸರಾ ಆಚರಣೆ ಮಾಡಿಕೊಂಡು ಬರಲಾಗಿದೆ ಎಂದರು.

ಶಾಸಕರಾದ ಎ.ಆರ್.ಕೃಷ್ಣ ಮೂರ್ತಿ ಅವರು ಮಾತನಾಡಿ ಜಿಲ್ಲೆಯು ಹೆಚ್ಚು ಅರಣ್ಯ ಪ್ರದೇಶ ಹೊಂದಿದ್ದು ಅನೇಕ ಪ್ರವಾಸಿ ತಾಣಗಳು,ಧಾರ್ಮಿಕ ಯಾತ್ರಾ ಕ್ಷೇತ್ರಗಳನ್ನು ಒಳಗೊಂಡಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಹೆಚ್ಚಿನ ಅವಕಾಶಗಳು ಇವೆ ಎಂದರು.

ಶಾಸಕರಾದ ಎಚ್.ಎಂ.ಗಣೇಶ್ ಪ್ರಸಾದ್ ಅವರು ಮಾತನಾಡಿ ದಸರಾಗೆ 400 ವರ್ಷಗಳ ಇತಿಹಾಸವಿದೆ.ಚಾಮರಾಜನಗರ ಜಿಲ್ಲೆಯಲ್ಲಿ ನಮ್ಮ ತಂದೆ ಸಚಿವರಾದ ಮಹದೇವ ಪ್ರಸಾದ್ ಅವರ ಕಾಲದಲ್ಲಿ ದಸರೆ ಆರಂಭವಾಯಿತು. ಅಂದಿನಿಂದ ಇಂದಿನವರೆಗೂ ದಸರಾವನ್ನು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ನಡೆಸಿಕೊಂಡು ಬರಲಾಗುತ್ತಿದೆ. ದಸರಾ ಸಂಭ್ರಮವನ್ನು ಜಿಲ್ಲಾ ಜನತೆ ಕಣ್ತುಂಬಿಕೊಳ್ಳಲಿ ಎಂದು ಹಾರೈಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು,ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ,ತಹಶಿಲ್ದಾರ್ ಬಸವರಾಜು,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಗುರುಲಿಂಗಯ್ಯ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *