ಚಾಮರಾಜನಗರ: ತಾಲೂಕಿನ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು (ಇಒ) ಮತ್ತು ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಒಂದು ದಿನದ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ತರಬೇತಿ ಕಾರ್ಯಗಾರ ನಗರದಲ್ಲಿಂದು ನಡೆಯಿತು.
ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಗಾರವನ್ನು ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಲಕ್ಷ್ಮಿ ಅವರು ಉದ್ಘಾಟಿಸಿದರು.
ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ದಡಿಯಲ್ಲಿ 2025ಕ್ಕೆ ಕ್ಷಯ ಮುಕ್ತ ಭಾರತವನ್ನು ಮಾಡುವ ಗುರಿ ಸಾಧಿಸಲು ಗ್ರಾಮ ಪಂಚಾಯತಿಗಳನ್ನು ಗುರುತಿಸಿ ಘೋಷಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಆರೋಗ್ಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕಿದೆ ಎಂದು ಉಪಕಾರ್ಯದರ್ಶಿ ಲಕ್ಷ್ಮಿ ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ್, ಸಹಾಯಕ ಕಾರ್ಯದರ್ಶಿ ನಂಜುಂಡ ರಾಜ ಅರಸ್, ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ. ಎಂ.ಎಸ್. ರವಿಕುಮಾರ್, ಡಾ. ಕಿರಣ್, ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರರು, ಜಿಲ್ಲಾ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು, ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ಎನ್ಟಿಇಪಿ ಸಿಬ್ಬಂದಿಗಳು ಉಪಸ್ಥಿತರಿದ್ದರು.