ನಾಳೆ ಮೂರು ಸಂಘಗಳ ಸರ್ವಸದಸ್ಯರ ವಾರ್ಷಿಕ ಮಹಾಸಭೆ

ಚಾಮರಾಜನಗರ, ಆ- ಚಾಮರಾಜನಗರ ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ದಿ ಸಂಘ (ರಿ), ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘ (ನಿ) ಹಾಗೂ ಚಾಮರಾಜನಗರ ತಾಲ್ಲೂಕು ಶ್ರೀ ಸಂಗಮ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಮೂರು ಸಂಘಗಳ ೨೦೨೨-೨೩ ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಆ.೧೩ ೩ ಭಾನುವಾರ ಬೆಳಿಗ್ಗೆ ೯-೩೦ ಗಂಟೆಗೆ ಆಯೋಜಿಸಲಾಗಿದೆ.

ನಗರದ ಜೋಡಿರಸ್ತೆಯಲ್ಲಿರುವ ಶ್ರೀ ಸಿದ್ದಮಲ್ಲೇಶ್ವರ ಮಠದ ಅವರಣದ ಅನುಭವ ಮಂಟಪ ದಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸಮಾಜದ ನಿವೃತ್ತ ನೌಕರರಿಗೆ ಗೌರವ ಸನ್ಮಾನ, ಎಸ್.ಎಸ್.ಎಲ್.ಸಿ. ಮತ್ತು ದ್ವಿತಿಯ ಪಿ ಯು ಸಿ. ಯಲ್ಲಿ ಶೇಕಡ ೯೦ ಕ್ಕಿಂತ ಹೆಚ್ಚು ಅಂಕ ಪಡೆದಿರುವ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಅಭಿನಂದಿಸಲಾಗುತ್ತದೆ.

ಸಂಘದ ಸದಸ್ಯರುಗಳಿಗೆ ಈಗಾಗಲೇ ಆಹ್ವಾನ ಪತ್ರಿಕೆಗಳನ್ನು ಅಂಚೆ ಮೂಲಕ ಕಳುಹಿಸಲಾಗಿದೆ, ತಲುಪದೆ ಇರುವ ಸದಸ್ಯರು ಇದನ್ನೆ ಆಹ್ವಾನ ಪತ್ರಿಕೆ ಎಂದು ತಿಳಿದು ಸಭೆಗೆ ಹಾಜರಾಗಬೇಕೆಂದು ಸಂಘ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Leave a Reply

Your email address will not be published. Required fields are marked *