ನ.14 ರಿಂದ 20ರವೆಗೆ ಜಿಲ್ಲೆಯಲ್ಲಿ ಸಹಕಾರ ಸಪ್ತಾಹ

ಚಾಮರಾಜನಗರ: ನ.14ರಿಂದ 20ರವರೆಗೆ ಏಳು ದಿನಗಳ ಕಾಲ ಸಹಕಾರ ಸಪ್ತಾಹ-2023ರ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ಎಸ್. ನಂಜುಂಡಪ್ರಸಾದ್ ತಿಳಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ಎಸ್. ನಂಜುಂಡಪ್ರಸಾದ್ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 24 ವರ್ಷಗಳಿಂದ ಜಿಲ್ಲಾ ಸಹಕಾರ ಒಕ್ಕೂಟದ ಕಾರ್ಯನಿರ್ವಹಿಸುತ್ತಿದೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ಪÀÇರಕವಾದ ಶಿಕ್ಷಣ ಮತ್ತು ತರಬೇತಿ ನೀಡುವಂತೆ ಸಹಕಾರ ತತ್ವವನ್ನು ಪ್ರಚಾರ ಪಡಿಸುವ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, 7 ದಿನಗಳ ಕಾಲ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ನ. 14 ರಿಂದ ನ. 20 ವರೆಗೆ ನಡೆಯಲಿದೆ ಎಂದರು.

ಈ ಎಲ್ಲಾ ಕಾರ್ಯಕ್ರಮಗಳಿಗೆ ಜಿಲ್ಲೆಯ ಸಹಕಾರಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಹಕಾರ ಕ್ಷೇತ್ರದ ಬಲವರ್ಧನೆ ಹಾಗೂ ಸಹಕಾರ ಸಪ್ತಾಹವನ್ನು ಯಶಸ್ವಿಗೊಳಿಸಬೇಕೆಂದು ನಂಜುಂಡಪ್ರಸಾದ್ ಮನವಿ ಮಾಡಿದರು.

Leave a Reply

Your email address will not be published. Required fields are marked *