ಚಾಮರಾಜನಗರ: ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಉಪಯೋಜನೆಯಾದ ಬ್ಯಾಕ್ಯಾರ್ಡ್ ಮಿನಿ ಆರ್.ಎ.ಎಸ್. ಘಟಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ. 40ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ. 60ರಷ್ಟು ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗದವರಿಗೆ 3, ಮಹಿಳೆಯರಿಗೆ 2 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ತಲಾ 1 ಸೇರಿದಂತೆ ಒಟ್ಟು 7 ಗುರಿಗಳನ್ನು ಹೊಂದಲಾಗಿದೆ. ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕಡೆಯ ದಿನವಾಗಿದೆ.
ಆಸಕ್ತ ಒಳನಾಡು ಮೀನುಗಾರರು ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.