ಚಾಮರಾಜನಗರ: ಕೇಂದ್ರೀಯ ಸೈನಿಕ ಮಂಡಳಿಯಿಂದ 2023-24ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಂದ (ಸೇನಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಪ್ರಧಾನ ಮಂತ್ರಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು www.ksb.gov.in ನಲ್ಲಿ ಸಲ್ಲಿಸಬಹುದು ಎಂದು ಮೈಸೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.